Thursday, October 23, 2025
Flats for sale
Homeರಾಜ್ಯಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ನಾಳೆ ಸಭೆ,ಕಠಿಣಕ್ರಮ ಕೈಗೊಳ್ಳಲು...

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ನಾಳೆ ಸಭೆ,ಕಠಿಣಕ್ರಮ ಕೈಗೊಳ್ಳಲು ಸರಕಾರ ತೀರ್ಮಾನ ..!

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ದಿಂದ ಸಾಲಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಸರ್ಕಾರ, ಕಾನೂನಿಗೆ ತಿದ್ದುಪಡಿ ತಂದು ಕಠಿಣಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಿದೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿ ಕಠಿಣ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿAದು ಸುದ್ದಿಗಾರರಿಗೆ ತಿಳಿಸಿದರು.

ಮೈಕ್ರೋ ಫೈನಾನ್ಸ್ ಕಿರುಕುಳ ನೀಡುತ್ತಿರುವ ಬಗ್ಗೆ ತಮ್ಮ ಇಲಾಖೆಗೂ ಸಾಕಷ್ಟು ದೂರುಗಳು ಬಂದಿದೆ. ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿ ಕುರಿತಂತೆ ಸಾಲ ಪಡೆದವರಿಂದ ಅದಕ್ಕೆ ಬೇಕಾದ ಪತ್ರಗಳಿಗೆ ಸಹಿ ಹಾಕಿಸಿಕೊಂಡಿರುತ್ತಾರೆ. ಅದರ ಆಧಾರದ ಮೇಲೆ ಸಾಲ ಮರು ಪಾವತಿಗೆ ಮನೆ ಹಾಗೂ ಇನ್ನಿತರ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡುತ್ತಾರೆ. ಆದರೆ, ಸಾಲ ಪಡೆಯುವಾಗ ಮೈಕ್ರೋ ಫೈನಾನ್ಸ್ ಕಂಪನಿಗಳು ಸಹಿಹಾಕಿಸಿಕೊಂಡಿರುವ ಬಗ್ಗೆ ಸಾಲ ಪಡೆದವರಿಗೆ ಮಾಹಿತಿ ಇರುವುದಿಲ್ಲ. ನಿಯಮಗಳ ಪ್ರಕಾರವೇ ಕಂಪನಿಗಳು ಸಾಲ ಮರುಪಾವತಿಗೆ ಮುಂದಾಗುತ್ತಿವೆ. ಆದರೆ, ಸಾಲಗಾರರ ರಕ್ಷಣೆಗೂ ಬಿಗಿಯಾದ ಕಾನೂನಿನ ಅವಶ್ಯಕತೆ ಇದ್ದು, ನಾಳೆ ಸಿದ್ದರಾಮಯ್ಯ ಕರೆದಿರುವ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಕಾನೂನು ಸಚಿವ ಎಚ್.ಕೆ ಪಾಟೀಲ್ ಅವರೂ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನೂತನ ಕಾಯ್ದೆ ಜಾರಿಗೆ ತರುವುದಾಗಿ ಹೇಳಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಸೂಕ್ತ ಕೊಳ್ಳಲಾಗುತ್ತಿದೆ ಎಂದರು.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಗೆ ನ್ಯಾಯ ಕೊಡಿಸುವಂತೆ ಮೃತನ ಪತ್ನಿ ಗೃಹ ಸಚಿವರಿಗೆ ಮಾಂಗಲ್ಯ ಸರ ಸಮೇತ ಮನವಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಸಾಲಗಾರರ ಕಾಟಕ್ಕೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಶರಣ ಬಸವ ಎಂದು ಗುರುತಿಸಲಾಗಿದ್ದು, ಈ ಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಮೇಸ್ತ್ರಿ ಕೆಲಸ ಮಾಡಿಕೊಂಡು ಟಂಟO ಚಾಲಕನಾಗಿದ್ದ ಶರಣಬಸವ ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಹಣಕಾಸು ಸಂಸ್ಥೆಗಳ ಕಿರುಕುಳ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡು ಪತ್ನಿ ಹಾಗೂ ಮೂವರು ಮಕ್ಕಳು, ತಂದೆ-ತಾಯಿ
ಕAಗಾಲಾಗಿದ್ದಾರೆ.

ಮೈಕ್ರೋ ಫೈನಾನ್ಸ್ಗಳ ಕಿರುಕುಳಕ್ಕೆ ಬೇಸತ್ತು ಶರಣ ಬಸವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎAದು ಉಲ್ಲೇಖಿಸಿ ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿಯ ಸಾವನಿಂದ ಕಂಗಾಲಾಗಿರುವ ಮೃತನ ಪತ್ನಿ ಪಾರ್ವತಿ ಸಚಿವ ಪರಮೇಶ್ವರ್ ಅವರಿಗೆ ಮಾಂಗಲ್ಯ ಸರ ಹಾಗೂ ಮನವಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಮನೆಯ ಆಧಾರಸ್ತಂಭವಾಗಿದ್ದ ಪತಿಯನ್ನು ಕಳೆದುಕೊಂಡು ಸAಕಷ್ಟಕ್ಕೆ ಸಿಲುಕಿದ್ದೇವೆ. ಸಾಲ ವಸೂಲಿಗಾಗಿ ಕಿರುಕುಳ ಕೊಡುವ ಮೈಕ್ರೋ ಫೈನಾನ್ಸ್ಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಪತ್ರ ಬರೆದಿದ್ದಾರೆ.

ಸಾಲ ತೀರಿಸಲು ಕಾಲಾವಕಾಶ ನೀಡದೆ ಮನೆ ಬಾಗಿಲಿನತ್ತ ಬರುತ್ತಿರುವುದರಿಂದ ಜನರು ಕಂಗಾಲಾಗಿದ್ದಾರೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular