Sunday, February 2, 2025
Flats for sale
Homeಜಿಲ್ಲೆಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ...

ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು,ಆಸ್ಪತ್ರೆಗೆ ದಾಖಲು..!

ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು ಆದರೆ ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಕರೆದುಕೊಂಡು ಹೋಗಿದ್ದರು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್​ಮಣಿ ಕಾಲಿಗೆ ಫೈರಿಂಗ್​ ಮಾಡಲಾಗಿತ್ತು ಆದರೆ ಇದೀಗ ಮತ್ತೋರ್ವ ಆರೋಪಿ ಮಹಜರ್ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮುರುಗನ್ ಡಿ ಮೇಲೆ ಪೊಲೀಸರಿಂದ ಗುಂಡು ಹಾರಿಸಲಾಗಿದೆ.

ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಘಟನೆ ನಡೆದಿದ್ದು, ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಆರೋಪಿ ದರೋಡೆಗೆ ಬಳಸಿದ್ದ ಪಿಸ್ತೂಲ್​ ಅನ್ನು ಬಚ್ಚಿಟ್ಟಿದ್ದ. ಅದನ್ನು ರಿಕವರಿ ಮಾಡಲು ಆತನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸ್ ಕಾನ್‌ಸ್ಟೆಬಲ್ ಮರ್ಮಾಂಗಕ್ಕೆ ಒದ್ದು ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನ ಮಾಡಿದ್ದಾನೆ. ಪಿಸಿ ಮಂಜುನಾಥ್​ಗೆ ಗಾಯವಾಗಿದೆ. ಆರೋಪಿ ಮುರುಗನ್ ಡಿ ದೇವರ್ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ಉಳ್ಳಾಲ ಇನ್ಸ್​ಪೆಕ್ಟರ್ ಬಾಲಕೃಷ್ಣ ಆತನ ಕಾಲಿಗೆ ಶೂಟ್ ಮಾಡಿದ್ದಾರೆ.ಒಟ್ಟಿನಲ್ಲಿ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ಸಿನಿಮೀಯ ರೀತಿಯಲ್ಲಿ ದಿನಕ್ಕೊಂದು ಎನ್ಕೌಂಟರ್ ನಡೆಸಿ ಕೈದಿಗೆ ಬಿಸಿಮುಟ್ಟಿಸುವುದು ಚರ್ಚೆಗೆ ಗ್ರಾಸವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular