ರಾಯ್ ಪುರ : ಛತ್ತೀಸ್ಗಢದ ಬಿಜಾಪುರದ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ೩೧ ನಕ್ಸಲೀಯರನ್ನು ನಿನ್ನೆ ಬೆಳಗ್ಗೆ ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ.
ಇದೇ ವೇಳೆ ಎನ್ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಗೊAಡ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮದ್ದು ಗುಂಡು ವಶಡಿಸಿಕೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನಕ್ಸಲರ ವಿರುದ್ದ ಭದ್ರತಾ ಪಡೆಗಳು ಸಮರ ಸಾರಿವೆ. ಎನ್ಕೌಂಟರ್ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಿಜಾಪುರದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ನಿನ್ನೆ ಬೆಳಗ್ಗೆ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ವೇಳೆ ಡಜನ್ ಗೂ ಅಧಿಕ ಮಾವೋವಾದಿಗಳನ್ನು ಭದ್ರತಾ ಪಡೆ ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ.
ರಾಷ್ಟ್ರೀಯ ಉದ್ಯಾನವನ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭದ್ರತಾ ಸಿಬ್ಬಂದಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಛತ್ತೀಸ್ಗಢದಲ್ಲಿ ನಕ್ಸಲಿಸಂ ಅನ್ನು ಕಿತ್ತೊಗೆಯುವಲ್ಲಿ ಯಶಸ್ವಿಯಾದ ಭದ್ರತಾ ಪಡೆಗಳು ಭಾನುವಾರ ರಾಜ್ಯದ ಬಿಜಾಪುರದ ಅರಣ್ಯ ಪ್ರದೇಶದಲ್ಲಿ 12 ನಕ್ಸಲೀಯರನ್ನು ತಟಸ್ಥಗೊಳಿಸಿವೆ. ಎನ್ಕೌಂಟರ್ ಬಗ್ಗೆ ವಿವರಗಳನ್ನು ನೀಡಿದ ಛತ್ತೀಸ್ಗಢ ಪೊಲೀಸರು, ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನದ ಕಾಡಿನಲ್ಲಿ ಬೆಳಿಗ್ಗೆ ಎನ್ಕೌಂಟರ್ ಪ್ರಾರಂಭವಾಯಿತು ಎAದು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ 31 ಮಂದಿ ಬಲಿ ಇದಕ್ಕೂ ಮುನ್ನ ಜನವರಿ 31 ರಂದು ಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 31 ನಕ್ಸಲೀಯರು ಹತರಾಗಿದ್ದರು. ಛತ್ತೀಸ್ಗಢ-ಒಡಿಶಾ ಗಡಿಯಲ್ಲಿರುವ ಮಣಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ರಾತ್ರೋರಾತ್ರಿ ಹೊಸ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪೋಲಿಸ್ ಪಡೆ, ಕೇಂದ್ರೀಯ ಮೀಸಲು ಪೋಲೀಸ್ ಪಡೆ, ಛತ್ತೀಸ್ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು ಭದ್ರತಾ ಸಿಬ್ಬಂದಿಯ ಜಂಟಿ ತAಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಇದೀಗ ಮತ್ತೆ 12 ಮಂದಿ ನಕ್ಸಲರನ್ನು ಹತ್ಯೆ ಮಾಡಿದ್ದಾರೆ.