Friday, March 13, 2026
Flats for sale
Homeಜಿಲ್ಲೆಮಂಗಳೂರು : ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿಯಲ್ಲಿ ತೆರೆಗೆ ಸಿದ್ದಗೊಂಡ "ಸ್ಕೂಲ್ ಲೀಡರ್“ ಕನ್ನಡ ಚಲನಚಿತ್ರ..!

ಮಂಗಳೂರು : ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿಯಲ್ಲಿ ತೆರೆಗೆ ಸಿದ್ದಗೊಂಡ “ಸ್ಕೂಲ್ ಲೀಡರ್“ ಕನ್ನಡ ಚಲನಚಿತ್ರ..!

ಮಂಗಳೂರು : ಸನ್ ಮ್ಯಾಟ್ರಿಕ್ಸ್‌ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು ಏಪ್ರಿಲ್ ತಿಂಗಳಲ್ಲಿ ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಈ ಹಿಂದೆ ಬಿಡುಗಡೆಗೊಂಡು ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಈ ಹಿಂದೆ ಪೆನ್ಸಿಲ್ ಬಾಕ್ಸ್ ಸಿನಿಮಾ ಮಾಡಿದ್ದ ನಾನು ಸ್ಕೂಲ್ ಲೀಡರ್ ಚಿತ್ರಕ್ಕೆ ಕತೆ, ಚಿತ್ರ ಕತೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದೇನೆ. ಪೆನ್ಸಿಲ್ ಬಾಕ್ಸ್ ಚಿತ್ರದ ಗೀತೆ ರಚನೆಗಾಗಿ 2019 ನೇ ಸಾಲಿನ ಅತ್ಯುತ್ತಮ ಗೀತ ರಚನಕಾರ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿದ್ದೆ ಎಂದರು.

ಸ್ಕೂಲ್ ಲೀಡ‌ರ್ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ, ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವ ಕಥಾವಸ್ತುವನ್ನು ಹೊಂದಿದೆ. ಇದು ಶಾಲಾ ಚುನಾವಣೆಯನ್ನು ಆಧರಿಸಿದ ಕತೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ. ಸುಮಾರು 25 ಶಾಲೆಯ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ.

ತುಳು ಚಿತ್ರ ರಂಗದ ದಿಗ್ಗಜರಾದ ಅರವಿಂದ್ ಬೋಳಾರ್, ಬೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ ಮತ್ತು ಕನ್ನಡದ ಹಿರಿಯ ನಟ ರಮೇಶ್ ಭಟ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಓಟು ಓಟು ಎಂಬ ಹಾಡು ಈಗಾಗಲೇ ಬಿಡುಗಡೆಗೊಂಡಿದ್ದು ಈ ಹಾಡಿನ ತುಣುಕು ಇನ್ಸಾಗ್ರಾಮ್ ನಲ್ಲಿ ಲಕ್ಷಕ್ಕೂ ಅಧಿಕ ವೀಕ್ಷಕರನ್ನು ತಲುಪಿದೆ. ಚಿತ್ರದ ಛಾಯಾಗ್ರಾಹಕರಾಗಿ ಮೋಹನ್ ಪಡ್ರೆ, ಜಯಕಾರ್ತಿ ಯವರ ಸಂಗೀತ, ಸಚಿನ್ ರಾಮ್ ಸಂಕಲನ, ಆಶಿಶ್ ಅಂಚನ್ ನೃತ್ಯ ನಿರ್ದೇಶನ ಮತ್ತು ಅಕ್ಷತ್ ವಿಟ್ಲ ಸಹ ನಿರ್ದೇಶಕರಾಗಿದ್ದು ಸುದರ್ಶನ್ ಶಂಕ‌ರ್ ಹಾಗೂ ಎಂ ಎಂ ವಿಮಲ್ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಹಾಸ್ಯದ ಜೊತೆಗೆ ಅತ್ಯುತ್ತಮ ಸಂದೇಶವನ್ನು ನೀಡುವ ಈ ಸಿನಿಮಾ ಎಲ್ಲಾ ವಯೋಮಾನದ ಸಿನಿಪ್ರಿಯರ ಮನ ಗೆಲ್ಲುವ ವಿಶ್ವಾಸವಿದೆ ಎಂದರು. ಸತ್ಯೇಂದ್ರ ಪೈ, ನಾಗೇಶ್ ಕಾಮತ್, ಬಾಲಕೃಷ್ಣ ಶೆಟ್ಟಿ, ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular