Wednesday, March 12, 2025
Flats for sale
Homeರಾಜ್ಯಹಾಸನ : ಅತ್ತೆ-ಸೊಸೆ ಜಗಳ : ನೊಂದ ಮಗ ತಾಯಿ ಜೊತೆ ಕೆರೆಗೆ ಹಾರಿ ಆತ್ಮಹತ್ಯೆ..!

ಹಾಸನ : ಅತ್ತೆ-ಸೊಸೆ ಜಗಳ : ನೊಂದ ಮಗ ತಾಯಿ ಜೊತೆ ಕೆರೆಗೆ ಹಾರಿ ಆತ್ಮಹತ್ಯೆ..!

ಹಾಸನ : ಕೌಟುಂಬಿಕ ಕಲಹದಿಂದ ನೊಂದು ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.

ಕಬ್ಬಳಿ ಗ್ರಾಮದ ಜಯಂತಿ (60) ಹಾಗೂ ಅವರ ಪುತ್ರ ಭರತ್ (35) ಆತ್ಮಹತ್ಯೆಗೆ ಶರಣಾದವರು,ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು. ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಪತ್ನಿ ಪತಿ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊAದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಸಾವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular