ಹಾವೇರಿ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ ಎಂದು ತಮ್ಮ ಕ್ಷ ಖಾತೆಯಲ್ಲಿ ಬರೆದಿದ್ದಾರೆ.
ಈ ಘಟನೆ ನಡೆದು ಒಂದು ವಾರ ಕಳೆದರೂ ಈ ಪ್ರಕರಣದಲ್ಲಿ ಬಂಧಿತನಾಗಿರುವ ನಯಾಜ್ ಎನ್ನುವ ಪ್ರಮುಖ ಆರೋಪಿಯ ರಕ್ಷಣೆಗೆ ದೊಡ್ಡ ಮಟ್ಟದ ಕಸರತ್ತು ನಡೆದಂತೆ ಕಾಣಿಸುತ್ತಿದ್ದು ಸ್ವಾತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯ ಧರ್ಮದವಳೆಂದು ತಿರಸ್ಕರಿಸಿ ತನ್ನ ಧರ್ಮದ ಬೇರೆ ಯುವತಿಯ ಜೊತೆ ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿರುವುದಕ್ಕೆ ಸ್ವಾತಿಯ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ. ಇದರ ಬಗ್ಗೆ ಪೊಲೀಸರು ನಿಷ್ಠುರವಾಗಿ ಅಪರಾಧಿಗಳನ್ನು ಹಿಡಿದು ಅದರ ಹಿಂದೆ ಇರುವ ಶಕ್ತಿಗಳನ್ನು ಕಡಿವಾಣ ಹಾಕುವುದು ಅತ್ಯಂತ ಅವಶ್ಯ. ಆದರೆ, ಇಂತಹ ಪ್ರಕರಣಗಳು ಕೆಲವೇ ದಿನಗಳಲ್ಲಿ ಅಧಿಕಾರಿಗಳು ಗಾಂಭಿರ್ಯತೆಯಿಂದ ತೆಗೆದುಕೊಳ್ಳದೇ ಮರೆತು ಹೋಗುವುದು ಅತ್ಯಂತ ಖಂಡನೀಯ ಎಂದರು. ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇಬ್ಬರು ಹಿಂದೂ ಹುಡುಗರು ನಯಾಜ್ಗೆ ಸಹಕಾರ ಕೊಟ್ಟಿದ್ದಾರೆ. ಲವ್ ಜಿಹಾದ್ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ಜಾಸ್ತಿ ಆಗುತ್ತಿದೆ. ಇದನ್ನು ನ್ಯಾಯಾಲಯ ಬಹಳ ಗಂಭೀರವಾಗಿ ಪರಿಗಣಿಸಬೇಕು. ಸ್ವಾತಿ ಕುಟುಂಬಕ್ಕೆ ಮುಸ್ಲಿಂ ಸಮಾಜದವರು 10 ಲಕ್ಷ ರೂ ಕೊಡಲಿ. ಸರ್ಕಾರ 25 ಲಕ್ಷ ರೂ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಆರೋಪಿ ಮುಸ್ಲಿಮರು ಅಂದ ತಕ್ಷಣವೇ ಬಚಾವ್ ಮಾಡುತ್ತದೆ. ಹಾಗೇನಾದ್ರೂ ಬಚಾವ್ ಮಾಡಿದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ರವರು ಹಾವೇರಿ ಎಸ್ಪಿ ಅಂಶು ಕುಮಾರ್ನ್ನು ಇಂದು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ನೂರಕ್ಕೆ ನೂರು ಇದು ಲವ್ ಜಿಹಾದ್ ಈ ಬಗ್ಗೆ ತೀವ್ರಗತಿಯಲ್ಲಿ ತನಿಖೆ ನಡೆಸಬೇಕು ಎಂದು ಮನವಿಮಾಡಿದ್ದಾರೆಂದು ತಿಳಿಸಿದ್ದಾರೆ.


