ಬೆಂಗಳೂರು : ಇದುವರೆಗೂ ಸಾಕಷ್ಟು ಕಾಲಾವಕಾಶ ನೀಡಿದ್ದ ಪೊಲೀಸ್ ಇಲಾಖೆ ಇದೀಗ ವಾಹನಗಳಿಗೆ ಹೆಚ್‌ಎಸ್‌ಆರ್ ನಂಬರ್ ಪ್ಲೇಟ್ ಅಳವಡಿಕೆಗೆ ಮಾರ್ಚ್ 31 ರ ಗಡವು ನೀಡಿದೆ.
ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ ೩೧,ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ಈ ಹಿಂದೆ ಹೆಚ್‌ಎಸ್‌ಆರ್ ನಂಬರ್ ಪ್ಲೇಟ್ ಅಳವಡಿಕೆಗೆ ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲಎಂದು ತಿಳಿಸಿದೆ.
ಮಾ 31 ನಂತರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.
2019 ರ ಏಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ ಹಳೆಯ, ಅಸ್ತಿತ್ವದಲ್ಲಿರುವ ವಾಹನಗಳು, ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್ , ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಹೆಚ್‌ಎಸ್‌ಆರ್ಪಿ ಅಳವಡಿಸುವುದು ಕಡ್ಡಾಯವಾಗಿದೆ.


