ಮೈಸೂರು : ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಹಸು ಮೈ ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ವಿನೋದ್ (17), ಬಸವೇಗೌಡ (45), ಮುದ್ದೇಗೌಡ (48) ನೀರುಪಾಲಾದವರು. ಗ್ರಾಮದ ಕೆರೆಯಲ್ಲಿ ಹಸು ತೊಳೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕೆರೆ ಬಳಿ ಜಮಾಯಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.