ಉಳ್ಳಾಲ ; ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಫಾಝಿಲನ್ನ ನಮ್ಮ ಹುಡುಗರೇ ಹತ್ಯೆಗೈದಿದ್ದಾರೆಂದು ಪ್ರಚೋದನಾಕಾರಿ ಭಾಷಣ ಮಾಡಿದ ಶರಣ್ ಪಂಪ್ವೆಲ್ ಬಂಧಿಸದಂತೆ ಪೊಲೀಸರ ಮೇಲೆ ರಾಜಕೀಯ ಒತ್ತಡವಿದ್ದು ಸ್ವತಂತ್ರವಾಗಿ ಕೆಲಸ ಮಾಡದ ಪೊಲೀಸ್ ವ್ಯವಸ್ಥೆ ಇದ್ದೇನು ಪ್ರಯೋಜನ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.ಭಾನುವಾರದಂದು ಉಳ್ಳಾಲ ಬೈಲಲ್ಲಿ ನಡೆದ ಶೌರ್ಯ ಯಾತ್ರೆ ಬಹಿರಂಗ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೋಮವಾರದಂದು ಉಳ್ಳಾಲ ಠಾಣೆಗೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ.ಆದರೆ ಪೊಲೀಸರು ಎಫ್ಐಆರ್ ದಾಖಲಿಸಲು ಮೀನಾ ಮೇಷ ಎಣಿಸುತ್ತಿದ್ದಾರೆ.ಬಜರಂಗದಳ,ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಬೇಕೆಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಒತ್ತಾಯಿಸಿದ್ದಾರೆ.


