Tuesday, February 17, 2026
Flats for sale
Homeಜಿಲ್ಲೆಉಳ್ಳಾಲ ; ಬಾಯಿಗೆ ಬಟ್ಟೆ ಕಟ್ಟಿ,ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.

ಉಳ್ಳಾಲ ; ಬಾಯಿಗೆ ಬಟ್ಟೆ ಕಟ್ಟಿ,ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.

ಉಳ್ಳಾಲ ; ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಶಂಕೆ ವ್ಯಕ್ತವಾಗಿದೆ.

ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು ಸಂಜೆ ಪ್ರಕರಣ ಬೆಳಕಿಗೆ ಬಂದಿದೆ.ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು.ಸರಿತಾ ವರ್ಮ ವಿಶೇಷ ಚೇತನರಾಗಿದ್ದು,ಮೂಗಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು‌.

ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಶಂಕೆಗೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣುಹಾಕಿದರೆ ಅನ್ನುವ ಸಂಶಯ ವ್ಯಕ್ತವಾಗಿದೆ.ವೃದ್ಧ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಮಾತ್ರ ಕಂಪೌಂಡ್ ಪ್ರವೇಶಿಸಿರುವ ಕುರಿತು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದರನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ‌.

RELATED ARTICLES

LEAVE A REPLY

Please enter your comment!
Please enter your name here

Most Popular