Wednesday, November 5, 2025
Flats for sale
Homeಜಿಲ್ಲೆಮಂಗಳೂರು : ಹಿಂಬದಿಯ ನಂಬರ್ ಪ್ಲೇಟ್ ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಿ ,ಹೆಲ್ಮೆಟ್ ಧರಿಸದೆ ಸ್ಕೂಟರ್...

ಮಂಗಳೂರು : ಹಿಂಬದಿಯ ನಂಬರ್ ಪ್ಲೇಟ್ ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಿ ,ಹೆಲ್ಮೆಟ್ ಧರಿಸದೆ ಸ್ಕೂಟರ್ ಚಲಾಯಿಸಿದ ವಿಡಿಯೋ ವೈರಲ್ ಪ್ರಕರಣ,ಸವಾರನಿಗೆ 5500 ದಂಡ…!

ಮಂಗಳೂರು : ಮಾರ್ಚ್ 23 ರಂದು ಸಂಜೆ 4-00 ಗಂಟೆಯ ಸಮಯದಲ್ಲಿ ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್ ನಿಂದ ಮರೆಮಚಿ, ಹೆಲ್ಮೆಟ್ ಧರಿಸದೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ನಿಂದಾಗಿ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋವನ್ನು ಸಾರ್ವಜನಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿದ್ದ ಪರಿಣಾಮ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ಮಂಗಳೂರು ಸಂಚಾರಿ ಪೊಲೀಸರು ಸವಾರನನ್ನು ಪತ್ತೆಹಚ್ಚಿ ದಂಡ ವಿಧಿಸಿದ ವರದಿಯನ್ನು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರವರು ತಿಳಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಂಚಾರಿ ಪೊಲೀಸರು ಸ್ಕ್ಕೂಟರ್ ಹಾಗೂ ಸ್ಕೂಟರ್ ಸವಾರನ ಪತ್ತೆ ಹಚ್ಚಲು ನಗರದ ಸಂಚಾರ ಪೊಲೀಸರು ಕಾರ್ಯಪ್ರವೃತ್ತರಾಗಿ ತಾಂತ್ರಿಕ ಕೌಶಲ್ಯದಿಂದ ಸಂಚಾರ ನಿಯಮವನ್ನು ಉಲ್ಲಂಘಿಸಿರುವ KA-19-HT-1944 ಸ್ಕೂಟರ್‌ನ್ನು ಪತ್ತೆ ಮಾಡಿದ್ದಾರೆ. ಸ್ಕೂಟರ್‌ನ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರನ ವಿರುದ್ದ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಹೆಲ್ಮೆಟ್ ಧರಿಸದೇ, ನಂಬ್ರ ಪ್ಲೇಟ್ ಮರೆಮಚಿರುವ ಬಗ್ಗೆ ದೋಷಪೂರಿತ ನಂಬ್ರ ಪ್ಲೇಟ್ ಬಳಕೆ, ನಿರ್ಲಕ್ಷ್ಯತನದ ಚಾಲನೆ, ಡಿ.ಎಲ್ ಇಲ್ಲದೇ ಚಾಲನೆ ಹಾಗೂ ಮೊಬೈಲ್ ಫೋನ್ ಬಳಕೆಯ ಕುರಿತು ರೂಪಾಯಿ 5,500/- ದಂಡ ವಿಧಿಸಲಾಗಿದೆ ಎಂದು ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular