Wednesday, October 22, 2025
Flats for sale
Homeರಾಜ್ಯಬೆಂಗಳೂರು ; ಏ.12, 13ಕ್ಕೆ ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ,ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕ್ರೀಡಾಕೂಟದ...

ಬೆಂಗಳೂರು ; ಏ.12, 13ಕ್ಕೆ ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ,ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕ್ರೀಡಾಕೂಟದ ಲಾಂಛನ ಬಿಡುಗಡೆ….!

ಬೆಂಗಳೂರು : ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಕ್ರೀಡಾಕೂಟ ಯಶಸ್ವಿಯಾಗಲಿ. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್, ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಸೋಮಶೇಖರಗಾಂಧಿ ಮತ್ತಿತರರು ಹಾಜರಿದ್ದರು.

ಲಾಂಛನ ವಿಶೇಷ:
ಕ್ರಿಕೆಟ್ ಕ್ರೀಡಾಕೂಟ ಲಾಂಛನವು, ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಹೊಯ್ಸಳ ಶಿಲ್ಪಕಲೆಯ ತವರೂರು, ಗೊಮ್ಮಟನ ನೆಲೆಬೀಡು ಎನ್ನುವುದನ್ನು ಪ್ರತಿನಿಧಿಸುತ್ತದಲ್ಲದೆ, ಮಲೆನಾಡು, ಅರೆ ಮಲೆನಾಡು, ಬಯಲುಸೀಮೆಯ ಸೊಗಡನ್ನು ಹೊಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular