Saturday, April 19, 2025
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯು ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ,ನಿರೀಕ್ಷಿಸಿದ ಅಂಕ ಬಂದಿರದ ಐವರು ವಿದ್ಯಾರ್ಥಿಗಳು...

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯು ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ,ನಿರೀಕ್ಷಿಸಿದ ಅಂಕ ಬಂದಿರದ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ..!

ಬೆಂಗಳೂರು : ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಗಳ ಫಲಿತಾಂಶಗಳನ್ನು ಮಂಗಳವಾರ, ಏಪ್ರಿಲ್ 8 ರಂದು ಪ್ರಕಟಿಸಲಾಯಿತು. ಕರ್ನಾಟಕ ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶಗಳನ್ನು ಪ್ರಕಟಿಸಿತು. ಉಡುಪಿ ಜಿಲ್ಲೆ ಶೇ. 93.90 ರಷ್ಟು ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಶೇ. 93.57 ರಷ್ಟು ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನ, ಬೆಂಗಳೂರು ಜಿಲ್ಲೆ ಶೇ. 85.36 ರಷ್ಟು ಮೂರನೇ ಸ್ಥಾನದಲ್ಲಿದೆ ಮತ್ತು ಯಾದಗಿರಿ ಜಿಲ್ಲೆ ಶೇ. 48.45 ರಷ್ಟು ಕೊನೆಯ ಸ್ಥಾನ ಪಡೆದಿತ್ತು.

ಇದೀಗ ಅನುತ್ತೀರ್ಣಗೊಂಡ ಹಾಗೂ ನಿರೀಕ್ಷಿಸಿದ ಅಂಕ ಬಂದಿಲ್ಲವೆಂದು ನೊಂದ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದ ಹಲವೆಡೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಒಂಟಿಕೊಪ್ಪಲ್ಲಿನ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೊಂದು ಕಡೆ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಅಗಸನೂರು ಎಂಬಲ್ಲಿ ವಿಜಯಲಕ್ಷ್ಮಿ ಸಿರಗುಪ್ಪದ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕೃಪಾ ಎಂಬ ವಿದ್ಯಾರ್ಥಿನಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಹಾವೇರಿಯ ಹಂಸಬಾವಿ ಠಾಣಾ ವ್ಯಾಪ್ತಿಯ ಪಿಯುಸಿ ವಿದ್ಯಾರ್ಥಿ ಕಾವ್ಯ ಬಸಪ್ಪ ಲಮಾಣಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವುದಕ್ಕೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಒಟ್ಟಿನಲ್ಲಿ ಈ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡರೆ ಮತ್ತೊಂದು ಪರೀಕ್ಷೆ ಇದೆ ಆದರೆ ವಿದ್ಯಾರ್ಥಿಗಳು ದೃತಿಗೆಡಬಾರದು ಜೀವನದಲ್ಲಿ ಮುಂದೆ ಕೂಡ ಹಲವು ಕಷ್ಟಗಳನ್ನೂ ಎದುರಿಸಲಿದೆ ಆದರೆ ಕೇವಲ ಪರೀಕ್ಷ್ಯೆಯಲ್ಲಿಅನುತ್ತೀರ್ಣಗೊಂಡರೆ ದುಡುಕಿ ಈ ನಿರ್ಧಾರ ತೆಗೆಯಬಾರದೆಂದು ತಜ್ಞರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular