ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಪ್ರಕರಣದಲ್ಲಿ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಬಳಸಿಕೊಂಡ ಆರೋಪ, ದಲಿತರ ಮೇಲೆ ಜಾತಿನಿಂದನೆ ಒಳಗೊಂಡAತೆ ಗಂಭೀರ ಆರೋಪಗಳನ್ನು ಶಾಸಕ ಮುನಿರತ್ನ ಎದುರಿಸುತ್ತಿದ್ದು, ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಜಾಮೀನು ಪಡೆದು ಹೊರಬಂದು ಇತ್ತೀಚೆಗೆ ಬಜೆಟ್ ಅಧಿವೇಶನದಲ್ಲೂ ಭಾಗಿಯಾಗಿದ್ದರು. ಇದೀಗ ಜಾತಿನಿಂದನೆ ಕೇಸ್ ಶಾಸಕ ಮುನಿರತ್ನ ಅವರಿಗೆ ಸಂಕಷ್ಟ ತಂದೊಡ್ಡಿದೆ. ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಯು. ಟಿ. ಖಾದರ್ ಅನುಮತಿ ನೀಡಿದ್ದಾರೆ. ಈ ಸಂಬAಧ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ