Saturday, July 18, 2026
Homeಜಿಲ್ಲೆಬೆಂಗಳೂರು : ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೊ ಯೋಜನೆ ಪ್ರಸ್ತಾವನೆಗೆ ಸರಕಾರ ಅನುಮೋದನೆ..!

ಬೆಂಗಳೂರು : ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೊ ಯೋಜನೆ ಪ್ರಸ್ತಾವನೆಗೆ ಸರಕಾರ ಅನುಮೋದನೆ..!

ಬೆಂಗಳೂರು : ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದರು.

ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬಂದರುಗಳ ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ ಹಾಗೂ ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಿದರು. ಸಾಗರ ಮಾಲಾ ಯೋಜನೆಯಡಿ ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರು.

ಪುನರ್ವಸತಿ, ಬಂದರು ಸಂಬಂದಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸುವ ಜತೆಗೆ ಅತಿಕ್ರಮಣ ಮಾಡಿಕೊಂಡಿರುವವರನ್ನು ಕೂಡಲೇ ಸ್ಥಳಾಂತರ ಮಾಡುವಂತೆ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸುವಂತೆ ಡ್ರೋಣ್ ಸರ್ವೇ ಮಾಡಿಸಿ ಇನ್ನು ಮೂರು ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಆಂಧ್ರಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳುನಾಡು ಹಾಗೂ ಗುಜರಾತ್‌ಗಳಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಬಂದರು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ, ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular