ಮಂಗಳೂರು : ಕುಡುಪುವಿನಲ್ಲಿ ಯುವಕನೊಬ್ಬ ಗುಂಪು ಹಲ್ಲೆಗೊಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಸೇರಿ ಮೂವರನ್ನು ಅಮಾನತು ಗೊಳಿಸಲಾಗಿದೆ ಎಂದು ಮಾಹಿತಿ ದೊರೆತಿದೆ.
ಕುಡುಪು ಭಟ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು 25 ಜನರನ್ನು ತನಿಖೆಗೆ ಒಳಪಡಿಸಿ ಖಚಿತ ಮಾಹಿತಿಯ ಮೇರೆಗೆ 15 ಜನರನ್ನು ಬಂಧಿಸಿದ್ದರು,ಬಳಿಕ ಬಂಧನದ ಸಂಖ್ಯೆ 20 ಕ್ಕೆ ಏರಿದೆ.
ಮಧ್ಯಾಹ್ನ ಸುಮಾರು 3:00 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಮಯದಲ್ಲಿ ವ್ಯಕ್ತಿ ಒಬ್ಬ ಗೋಣಿ ಚೀಲದೊಂದಿಗೆ ಮೈದಾನದ ಮಧ್ಯಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಹಿನ್ನೆಲೆ ಕೆಲವರು ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ ತುಳಿದು ಹಲ್ಲೆ ನಡೆಸಿದ್ದು, ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿಯು ಮೃತಪಟ್ಟಿರುವುದು ಕಂಡುಬಂದಿತ್ತು. ಬಳಿಕ ಪೊಲೀಸರು ತನಿಖೆಯನ್ನು ವಿಳಂಬಗೊಳಿಸಿದ ಹಿನ್ನೆಲೆ ಹಲವು ಸಂಘಟನೆಗಳು ಸರಕಾರಕ್ಕೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿತ್ತು.ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಕೂಡ ಒತ್ತಡ ಹಾಕಿದ್ದರು .ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಸೇರಿ ಮೂವರನ್ನು ಅಮಾನತು ಮಾಡಲಾಗಿದೆ .