Wednesday, October 22, 2025
Flats for sale
Homeರಾಜ್ಯಬೆಂಗಳೂರು : ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ : ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡುವ...

ಬೆಂಗಳೂರು : ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ : ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ,ತೀವ್ರ ವಿರೋಧ ಬೆನ್ನಲ್ಲೇ ಟ್ವೀಟ್ ಡಿಲೀಟ್..!

ಬೆಂಗಳೂರು : ಪೆಹಲ್ಗಮ್ ನಲ್ಲಿ 26 ಅಮಾಯಕರನ್ನು ಪಾಕಿಸ್ತಾನದ ಉಗ್ರರು ಹತ್ಯೆನಡೆಸಿದ್ದು ಇದಕ್ಕೆ ಪ್ರತಿಕಾರವಾಗಿ ಬೆಳ್ಳಂಬೆಳಿಗ್ಗೆ ಪಾಕ್​ನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಭಯೋತ್ಪಾದಕರ 9 ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ.

ಭಾರತೀಯ ಸೇನೆ ಆಪರೇಷನ್ ಸಿಂಧೂರ್ ದೇಶರಲ್ಲಿ ಹಲವು ಉಗ್ರರನ್ನು ಸಾಡೆ ಬಡಿದಿದ್ದು ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್​​ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿದ್ದ ಕರ್ನಾಟಕ ಕಾಂಗ್ರೆಸ್​ ಅನ್ನು ಜನರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.

ರಾಜ್ಯ ಸರಕಾರ ಒಂದಲ್ಲ ಒಂದು ವಿಚಾರದಲ್ಲಿ ಹಿಂದೂಗಳ ದಮನ ನೀತಿ ಅನುಸರಿಸುತ್ತಿದ್ದು ಇದರಿಂದ ಕೆಲವರು ಸಾಮಾಜಿಕಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ತನ್ನ ಟ್ವೀಟ್​​ನ್ನು ಡಿಲೀಟ್ ಮಾಡಿದೆ.ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್​ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಆದರೆ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ಸಿಗರು ಸೇರಿದಂತೆ ಜನರು ತೀವ್ರ ಕಿಡಿಕಾರಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್​ ಆ ಟ್ವೀಟ್​​ನ್ನು ಡಿಲೀಟ್​ ಮಾಡಿದೆ. ಬಳಿಕ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.ಒಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಕೋಲು ಕೊಟ್ಟು ಪೆಟ್ಟು ತಿಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular