Wednesday, October 22, 2025
Flats for sale
Homeರಾಜ್ಯಬೆಂಗಳೂರು : ಸುಹಾಸ್‌ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐ ಎ ತನಿಖೆಗೆ ವಹಿಸುವಂತೆ ಕರಾವಳಿ ಬಿಜೆಪಿ...

ಬೆಂಗಳೂರು : ಸುಹಾಸ್‌ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐ ಎ ತನಿಖೆಗೆ ವಹಿಸುವಂತೆ ಕರಾವಳಿ ಬಿಜೆಪಿ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧಾರ ..!

ಬೆಂಗಳೂರು : ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್‌ಶೆಟ್ಟಿ ಪ್ರಕರಣವನ್ನು ಎನ್‌ಐ ಎ ತನಿಖೆಗೆ ವಹಿಸುವಂತೆ ಆಗ್ರಹಿಸಿ ಕರಾವಳಿ ಭಾಗದ ಬಿಜೆಪಿ ಶಾಸಕರು ರಾಜ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಇದೇ ತಿಂಗಳ 9 ರAದು ಕರಾವಳಿ ಭಾಗದ ಬಿಜೆಪಿ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ಎನ್‌ಐಎ ತನಿಖೆಗೆ ಕೊಲೆ ಪ್ರಕರಣವನ್ನು ಒಪ್ಪಿಸುವಂತೆ ಮನವಿ ಮಾಡುವವರು ಎಂದು ಹೇಳಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 100 ಕ್ಕೂ ಹೆಚ್ಚು ಜನರು ಭಾಗಿಯಾಗಿ ಷಡ್ಯಂತ್ರ ನಡೆಸಿದ ಗುಮಾನಿ ಇದೆ. ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಫಂಡಿಂಗ್ ನಡೆದಿದೆ. ಜತೆಗೆ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆಂಬ ಆರೋಪವಿದೆ. ಹತ್ಯೆಗೆ ಸಹಕರಿಸಿದ ಮಹಿಳೆಯರನ್ನು ಇದುವರೆಗೆ ಬಂಧಿಸಿಲ್ಲ ಎಂಬ ಆರೋಪವೂ ವ್ಯಕ್ತವಾಗಿದೆ.


ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (NIA) ಮೂಲಕವೇ ತನಿಖೆ ನಡೆಸಬೇಕು. ಆಗಷ್ಟೇ ಸತ್ಯ ಬಹಿರಂಗವಾಗಲು ಸಾಧ್ಯ. ಆದರೆ ರಾಜ್ಯ ಸರ್ಕಾರ ಈ ನಿರ್ಣಯ ತೆಗೆದುಕೊಳ್ಳುತ್ತದೆ ಎಂಬ ನಿರೀಕ್ಷೆ ಇಲ್ಲ. ಹೀಗಾಗಿ ರಾಜ್ಯಪಾಲರ ಮಧ್ಯಪ್ರವೇಶಿಸಬೇಕು. ಈ ಹಿನ್ನೆಲೆಯಲ್ಲಿ ಕರಾವಳಿಯ ಉಭಯ ಜಿಲ್ಲೆಯ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಸುಹಾಸ್ ಹತ್ಯೆ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular