Thursday, March 12, 2026
Flats for sale
Homeರಾಜ್ಯಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಡಿಕೆ ಸುರೇಶ್‌ಗೆ ಕಣ್ಣು,ವೇದಿಕೆ ಸಜ್ಜು..!

ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಡಿಕೆ ಸುರೇಶ್‌ಗೆ ಕಣ್ಣು,ವೇದಿಕೆ ಸಜ್ಜು..!

ಬೆಂಗಳೂರು : ಕರ್ನಾಟಕ ಹಾಲು ಮಹಾಮಂಡಳದ ಮುಂದಿನ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ರವರನ್ನು ಆಯ್ಕೆ ಮಾಡಲು ವೇದಿಕೆ ಅಣಿಯಾಗಿದೆ.

ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಇಂದು ಬೆAಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಹಾಲು ಮಹಾಮಂಡಲದಹಾಲಿ ಅಧ್ಯಕ್ಷರಾಗಿರುವ ಮಾಜಿ ಶಾಸಕ ಭೀಮನಾಯಕ್ ಅವರ ಅವಧಿ ಜೂನ್‌ನಲ್ಲಿ ಅಂತ್ಯಗೊಳ್ಳಲಿದ್ದು, ನAತರ ಈ ಅಧ್ಯಕ್ಷ ಗಾದಿಯನ್ನು ಡಿ.ಕೆ. ಸುರೇಶ್ ಅಲಂಕರಿಸಲಿದ್ದಾರೆ ಎಂಬ ಮಾತುಗಳಿಗೆ ಪುಷ್ಠಿ ಕೊಡುವಂತೆ ಡಿ.ಕೆ. ಸುರೇಶ್ ಅವರು ಇಂದು ಬೆAಗಳೂರು ಹಾಲು ಮಹಾಮಂಡಲದ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಕೆಎಂಎಫ್‌ನ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟೆ ಡಿ.ಕೆ. ಸುರೇಶ್ ಅವರು ಬೆಂಗಳೂರು ಹಾಲು ಮಹಾಮಂಡಲದ ನಿರ್ದೇಶ ಸ್ಥಾನದ ಚುನಾವಣಾ ಕಣಕ್ಕೆ ಇಳಿದಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹೊಸದರಲ್ಲೇ ಕೆಎಂಎಫ್ ಅಧ್ಯಕ್ಷ ಗಾದಿಗೆ ಡಿ.ಕೆ. ಸುರೇಶ್ ರವರನ್ನು ಪರಿಗಣಿಸುವ ಪ್ರಸ್ತಾಪಗಳು ಇದ್ದವು. ಆಗ ಅವರು ಸಂಸದರಾಗಿದ್ದ ಕಾರಣ ಮಾಜಿ ಶಾಸಕ ಭೀಮನಾಯಕ್‌ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.

ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಬಿಜೆಪಿಯ ಡಾ. ಸಿ.ಎನ್. ಮಂಜುನಾಥ್ ವಿರುದ್ಧ ಪರಾಭವಗೊಂಡಿದ್ದರು. ಇದಾದ ಬಳಿಕ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಒತ್ತಡಗಳು ಕಾಂಗ್ರೆಸ್‌ನಲ್ಲಿ ಇದ್ದವು. ಹಾಲಿ ಅಧ್ಯಕ್ಷ ಭೀಮನಾಯಕ್ ಅವಧಿ ಪೂರ್ಣಗೊಳ್ಳದ ಕಾರಣ ಡಿ.ಕೆ. ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷ ಗಾದಿಗೆ ಆಯ್ಕೆ ಮಾಡುವುದು ಮುಂದಕ್ಕೆ ಹೋಗಿತ್ತು.

ಈಗ ಭೀಮನಾಯಕ್ ಅವಧಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ವೇದಿಕೆ ಅಣಿಯಾಗಿದೆ. ಈ ನಿಟ್ಟಿನಲ್ಲಿ ಡಿ.ಕೆ. ಸುರೇಶ್ ಅವರು ಕನಕಪುರ ಭಾಗದಿಂದ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾದ ನಂತರ ಮುಂದೆ ಜುಲೈನಲ್ಲಿ ನಡೆಯುವ ಕೆಎಂಎಫ್ ಅಧ್ಯಕ್ಷ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅಭ್ಯರ್ಥಿಯಾಗಲಿದ್ದಾರೆ. ಕೆಎಂಎಫ್‌ನಲ್ಲಿ ಕಾಂಗ್ರೆಸ್ ಬೆAಬಲಿತ ನಿರ್ದೇಶಕರುಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಡಿ.ಕೆ. ಸುರೇಶ್ ಮುಂದೆ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಿತ ಎಂದು ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular