ಮುಂಬೈ : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಆಕೆಯ ಮೂವರು ಸ್ನೇಹಿತರು ಯುವತಿಗೆ ಪಾನೀಯದಲ್ಲಿ ನಿದ್ರೆ ಮಾತ್ರೆ ಹಾಕಿ ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸೊಲ್ಲಾಪುರದ ವಿನಯ್ ಪಾಟೀಲ್(22), ಪುಣೆಯ ಸರ್ವಜ್ಞ ಗಾಯಕವಾಡ(22), ಸಾಂಗ್ಲಿಯ ತನ್ಮಯ್ ಪೇಡ್ನೆಕರ್(21) ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಅವರನ್ನು ಮೇ 27 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇ 18 ರಂದು ರಾತ್ರಿ 10 ಗಂಟೆ ಸುಮಾರಿಗೆ ಥಿಯೇಟರ್‌ನಲ್ಲಿ ಸಿನಿಮಾ ನೋಡಲು ಯೋಜಿಸಿದ್ದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಗುರಿಯಾಗಿಸಿಕೊಂಡಿದ್ದಾಗಿ ಆರೋಪಿಸಲಾಗಿದೆ. ಅದಕ್ಕೂ ಮೊದಲು, ಆರೋಪಿಗಳು ಆಕೆಯನ್ನು ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆಂದು ಮಾಹಿತಿ ದೊರೆತಿದೆ.
20 ರಿಂದ 22 ವರ್ಷ ವಯಸ್ಸಿನ ಮೂವರು ಮದ್ಯದ ಅಮಲಿನಲ್ಲಿದ್ದ ಆರೋಪಿಗಳು ಅತ್ಯಾಚಾರವೆಸಗಿದ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕರ್ನಾಟಕದ ಬೆಳಗಾವಿ ಮೂಲದ ಮಹಿಳೆ ಈ ಬಗ್ಗೆ ಮಾಹಿತಿ ನೀಎಡಿದ್ದು ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ.