Saturday, March 14, 2026
Flats for sale
Homeಜಿಲ್ಲೆಮಂಗಳೂರು : ಮಳೆ ಅವಾಂತರಕ್ಕೆ ಹಲವೆಡೆ ಮನೆಗಳು ಜಲಾವೃತ, ತಡೆಗೋಡೆ ಕುಸಿದು ಬಾಲಕಿ ಸಾವು ,...

ಮಂಗಳೂರು : ಮಳೆ ಅವಾಂತರಕ್ಕೆ ಹಲವೆಡೆ ಮನೆಗಳು ಜಲಾವೃತ, ತಡೆಗೋಡೆ ಕುಸಿದು ಬಾಲಕಿ ಸಾವು , ಗುಡ್ಡ ಜರಿದು ಮಹಿಳೆ ಸಾವು, ಮಕ್ಕಳು ಸೇರಿ ಐವರು ಮಣ್ಣಿನಡಿ ಸಿಲುಕಿದ ಶಂಕೆ, ರಕ್ಷಣೆಗೆ ಕಾರ್ಯಾಚರಣೆ !

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಫಾತಿಮಾ ನಯೀಮ (6) ಎನ್ನುವ ಮಗು ಮೃತಪಟ್ಟಿದೆ.

ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ರಕ್ಷಣೆ ಮಾಡಿದ್ದರು. ಸದ್ಯ ಮೋಂಟೆಪದವು ಬಳಿ ಮೂವರ ರಕ್ಷಣೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular