Thursday, July 23, 2026
Homeಜಿಲ್ಲೆಮಂಗಳೂರು : ಅರುಣ್‌ ಕುಮಾರ್‌ ಪುತ್ತಿಲ ಕಲ್ಬುರ್ಗಿಗೆ ಗಡಿಪಾರು: ಜೂನ್ 6 ರಂದು ವಿಚಾರಣೆಗೆ ಹಾಜರಾಗಲು...

ಮಂಗಳೂರು : ಅರುಣ್‌ ಕುಮಾರ್‌ ಪುತ್ತಿಲ ಕಲ್ಬುರ್ಗಿಗೆ ಗಡಿಪಾರು: ಜೂನ್ 6 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್‌..!

ಮಂಗಳೂರು ; ಅರುಣ್ ಕುಮಾರ್ ಪುತ್ತಿಲರಿಗೆ ಗಡಿಪಾರು ಆದೇಶ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ.

ಅಲ್ಲದೇ ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ. ಈ ಪ್ರಕರಣದ ಪ್ರಕಾರ ಸ್ವತಃ ಅರುಣ್ಕುಮಾರ್ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಹೇಳಲಾಗಿರುವ ಕುರಿತು ವರದಿಯಾಗಿದೆ.

ಒಂದು ವೇಳೆ ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದೇ ಇದ್ದ ಪಕ್ಷದಲ್ಲಿ ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಏಕಪಕ್ರಿಯವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular