ನವದೆಹಲಿ : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಮತ್ತು ಗಾಜಿಯಾಬಾದ್ ಪೊಲೀಸರು ಜಂಟಿ ತನಿಖೆ ಆರಂಭಿಸಿ ಆರೋಪಿಯನ್ನು ಗಾಜಿಯಾಬಾದ್‌ನಲ್ಲಿ ಬಂಧಿಸಲಾಗಿದೆ.
ಗಾಜಿಯಾಬಾದ್‌ನಲ್ಲಿರುವ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ದೆಹಲಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು, ಕೊಲೆ ಬೆದರಿಕೆ ಮಾಹಿತಿ ಆಧರಿಸಿದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ವಿಚಾರಣೆ ವೇಳೆ ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಯಾಬಾದ್‌ನ ಉಪ ಪೊಲೀಸ್ ಆಯುಕ್ತ ಪ್ರಕಾರ, ರಾತ್ರಿ 11 ಗಂಟೆ ಸುಮಾರಿಗೆ ಬೆದರಿಕೆ ಕರೆ ಬಂದಿತು. ಕರೆ ಮಾಡಿದವರು ಕರೆಯನ್ನು ಕಡಿತಗೊಳಿಸಿ ಬೆದರಿಕೆ ನೀಡಿದ ತಕ್ಷಣ ಫೊನ್ ಅನ್ನು ಸ್ವಿಚ್ ಆಫ್ ಮಾಡಿದರು. ಗಾಜಿಯಾಬಾದ್ ಪೊಲೀಸರ ಅಂತರ ರಾಜ್ಯ ಸಮನ್ವಯ ಘಟಕ ರಚಿಸಿ ತಕ್ಷಣ ಆರೋಪಿಯನ್ನು ಬಂಧಿಸಲಾಗಿತ್ತು ಎಂದು ಹೇಳಿದ್ದಾರೆ.


