ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಬೇಡಿಕೆಯ ಮೇರೆಗೆ ಕೇಂದ್ರ ಸರಕಾರ NIA ತನಿಖೆಗೆ ವಹಿಸಿತ್ತು ಅದರಂತೆಯೇ ತನಿಖೆ ಅಖಾಡಕ್ಕೆ NIA ತಂಡ ಅಧಿಕಾರಿಗಳು ಅಖಾಡಕ್ಕಿಳಿದಿದ್ದಾರಡ.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ NIA ತಂಡದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದಾರೆ ಡಿ ಎಸ್ ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರಿಗೆ ಆಗಮಿಸಿದ್ದು ಮಂಗಳೂರು ಸಿಸಿಬಿ ಅಧಿಕಾರಿಗಳಿಂದ NIA ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ PFI ಕಾರ್ಯಕರ್ತರು,ಹಾಗೂ ಇನ್ನಿತರ ಪೋಲಿಸ್ ಸಿಬ್ಬಂದಿ ಗಳು ಶಾಮೀಲಾಗಿರುವ ಬಗ್ಗೆ ಮಾಹಿತಿ ಇದ್ದ ಕಾರಣ ಈ ಪ್ರಕರಣದ ತನಿಖೆಯನ್ನು NIA ಗೆ ವಹಿಸಿತ್ತು,ಒಟ್ಟಿನಲ್ಲಿ ಈ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆಂದು ಮುಂದಿನ ತನಿಖೆಯಲ್ಲಿ ತಿಳಿಯಲಿದೆ.