ಮಂಗಳೂರು ; ಮಂಗಳೂರಿನಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್ ಚಿತ್ರದ ಚಿತ್ರೀಕರಣ ಮಂಗಳೂರು ಹೊರವಲಯದ ಪಿಲಿಕುಳ ಗುತ್ತಿನ ಮನೆಯಲ್ಲಿ ನಡೆಯುತ್ತಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಜೈಲರ್ ಸಿನಿಮಾಕ್ಕೆ ಭಾನುವಾರ ರಾತ್ರಿ ಮಂಗಳೂರಿಗೆ ರಜನಿಕಾಂತ್ ಆಗಮಿಸಿದ್ದಾರೆ.
ಪಿಲಿಕುಳದ ಗುತ್ತಿನ ಮನೆಯಲ್ಲಿ ವಿಶೇಷ ಸೆಟ್ ಹಾಕಿ ಚಿತ್ರೀಕರಣ ನಡೆಯುತ್ತಿದೆ.
ಭದ್ರತೆ ದೃಷ್ಟಿಯಿಂದ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಗುತ್ತಿನ ಮನೆ ಪ್ರವೇಶ ನಿಷೇಧಿಸಲಾಗಿದೆ.
ರಜನಿಕಾಂತ್ ರ 169ನೇ ಚಿತ್ರವಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ.
ಸದ್ಯ ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ರಜನಿಕಾಂತ್ ವಾಸ್ತವ್ಯ ಹೂಡಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಮಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ.
ಕರಾವಳಿ ಭಾಗದ ಸಂಸ್ಕೃತಿ ಬಿಂಬಿಸುವ ದೃಶ್ಯಗಳಿಗಾಗಿ ಹಳ್ಳಿ ಸೆಟ್ ಹಳ್ಳಿ ಮನೆಯ ಸೆಟ್ ನಲ್ಲಿ ಎತ್ತಿನ ಗಾಡಿ, ಕುಸ್ತಿ ಅಖಾಡ ನಿರ್ಮಿಸಲಾಗಿದೆ.