Sunday, July 13, 2025
Flats for sale
Homeರಾಜಕೀಯನವದೆಹಲಿ : 5 ವರ್ಷ ಸಿ.ಎಂ ಹುದ್ದೆ ಖಾಲಿ ಇಲ್ಲ : ದೆಹಲಿಯಲ್ಲಿ ಸಿದ್ದರಾಮಯ್ಯ..!

ನವದೆಹಲಿ : 5 ವರ್ಷ ಸಿ.ಎಂ ಹುದ್ದೆ ಖಾಲಿ ಇಲ್ಲ : ದೆಹಲಿಯಲ್ಲಿ ಸಿದ್ದರಾಮಯ್ಯ..!

ನವದೆಹಲಿ : ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ. ಹೀಗಾಗಿ ಹೈಕಮಾಂಡ್ ಬಳಿ ಅಧಿಕಾರ ಹಂಚಿಕೆ ವಿಷಯವೇ ಪ್ರಸ್ತಾಪವಾಗಿಲ್ಲ ಇಂದು ಹೇಳಿರುವ ಸಿದ್ದರಾಮಯ್ಯ,5 ವರ್ಷಗಳ ಕಾಲ ತಾವೇ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯುದಾಗಿ ಪುನರುಚ್ಛರಿಸಿದ್ದಾರೆ.

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕುರಿತಂತೆ ನಾನಾ ವ್ಯಾಖ್ಯಾನಗಳು ಹಾಗೂ ಕೆಲ ಶಾಸಕರಿಂದ ಬಹಿರಂಗ ಹೇಳಿಕೆಗಳು ಹೇಳುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ದೆಹಲಿ ಪ್ರವಾಸದಲ್ಲಿರುª ಸಿದ್ದರಾಮಯ್ಯ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ ಸಿಎಂ ಸ್ಥಾನ ಖಾಲಿಯಿಲ್ಲ. ಆದರೆ ನಾಯಕತ್ವ ಬದಲಾವಣೆ ವಿಚಾರ ಎಲ್ಲಿಂದ ಬರುತ್ತದೆ. ತಾವಾಗಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಲಿ, ನಾಯಕತ್ವ ವಿಚಾರ ಕುರಿತಂತೆ ಹೈಕಮಾAಡ್ ತೆಗೆದುಕೊಳ್ಳುವ ವಿಚಾರ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಸ್ಪಷ್ಟ ಪಡಿಸಿದರು.

ಕೆಲವು ಶಾಸಕರು ನನ್ನ ಪರವಾಗಿ ಇನ್ನು ಕೆಲವು ಶಾಸಕರು ಡಿ.ಕೆ.ಶಿವ ಕುಮಾರ್ ಹೇಳಿಕೆ ಬಗ್ಗೆ ನೀಡುತ್ತಾರೆ. ಆದರೆ ಇದು ಅವರು ವೈಯಕ್ತಿಕ ಅಭಿಪ್ರಾಯವಾಗಿದೆ. ಮುಖ್ಯಮಂತ್ರಿ ಬದಲಾವಣೆ ಅಥವಾ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸಿದೆ ಎಂದು ಪ್ರಶ್ನೆಯೊAದಕ್ಕೆ ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆ ಕುರಿತು ಬಿಜೆಪಿಯವರು ಹೇಳುತ್ತಿರುವ ಹೇಳಿಕೆಗೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ಬಿಜೆಪಿಯವರು ನಮ್ಮ ಹೈಕಮಾಂಡ್ ಯಾರೋ ಹೇಳುವುದನ್ನು ಕೇಳಿ ಗಾಳಿ ಸುದ್ಧಿ ಹಬ್ಬಿಸುತ್ತೀರಾ, ತಾವಾಗಲಿ, ಡಿಕೆ ಶಿವಕುಮಾರ್ ಆಗಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಈ ಬಗ್ಗೆ ತಾವೇ ಕೆಲವು ದಿನಗಳ ಹಿಂದೆ 5 ವರ್ಷ ಮುಖ್ಯಮಂತ್ರಿಯಾಗಿ ಮುAದುವರಿಯುತ್ತೇನೆ ಎಂದು ಹೇಳಿದ್ದೇನೆ. ಇಷ್ಟಾದರೂ ಗಾಳಿ ಸುದ್ಧಿ ಹಬ್ಬಿಸಿರುತ್ತಿರುವ ಬಗ್ಗೆ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡರು.

ನಾಯಕತ್ವ ಬದಲಾವಣೆ ಕುರಿತಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ಗೊಂದಲ ಸೃಷ್ಟಿಸುತ್ತಿದ್ದೀರಿ ಎಂದು ಮೂದಲಿಸಿದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಭೇಟಿಗೆ ಅವಕಾಶ ಕೇಳಿದ್ದೇನೆ.ಆದರೆ ಅವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿದ್ದಾರೆ. ಆದ್ದರಿAದ ಅವರನ್ನು ಭೇಟಿ ಮಾಡಲು ಆಗುತ್ತಿಲ್ಲ. ದೆಹಲಿಗೆ ಬಂದ ಸಂದರ್ಭದಲ್ಲಿ ನಮ್ಮ ನಾಯಕರನ್ನು ಭೇಟಿ ಮಾಡಲು ತಪ್ಪೇ ಎಂದು ಪ್ರಶ್ನಿಸಿದರು.

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ವಿಚಾರ ಬದಲಾವಣೆ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆದಿರುವ ಬೆನ್ನಲ್ಲೇ ದೆಹಲಿ ಭೇಟಿ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸಂಜೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿರುವುದು ಕುತೂಹಲ ಕೆರಳಿಸಿದೆ.

ಈಗಾಗಲೇ ಸುರ್ಜೇವಾಲಾ ಅವರು ಎರಡು ಬಾರಿ ಬೆಂಗಳೂರಿಗೆ ಭೇಟಿ ನೀಡಿ ಕಾಂಗ್ರೆಸ್ ಶಾಸಕರ ಜೊತೆ ಮಾತುಕತೆ ನಡೆಸಿ, ಸರ್ಕಾರ ಮತ್ತು ಸಚಿವರ ಕಾರ್ಯ ವೈಖರಿಯಗಳ ಬಗ್ಗೆ ಅಹವಾಲು ಆಲಿಸಿದ್ದಾರೆ. ಬಹುತೇಕ ಶಾಸಕರು ಸಚಿವರ ಕಾರ್ಯವೈಖರಿಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಶಾಸಕರ ಅಭಿಪ್ರಾಯ ಸಂಗ್ರಹಿಸಿರುವ ಸುರ್ಜೇವಾಲಾ ದೆಹಲಿಗೆ ವಾಪಾಸ್ ಆಗಿದ್ದು, ಸುರ್ಜೇವಾಲ ಮೈಸೂರು ವಿಭಾಗ 42 ಮಂದಿ ಶಾಸಕರು ಹಾಗೂ ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ ಭಾಗ ಸೇರಿದಂತೆ 61 ಶಾಸಕರ ಜೊತೆ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಹೊರಡಿದ್ದಾರೆ.

ಆಡಳಿತ ವೈಫಲ್ಯ ಬಗ್ಗೆ ಶಾಸಕ ಬಿ.ಆರ್. ಪಾಟೀಲ್ ಮತ್ತು ರಾಜು ಕಾಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದು ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಈ ಬೆಳವಣೆಗೆಯನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಸುರ್ಜೇವಾಲ ಅವರನ್ನು ರಾಜ್ಯಕ್ಕೆ ಕಳುಹಿಸಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿತು.

RELATED ARTICLES

LEAVE A REPLY

Please enter your comment!
Please enter your name here

Most Popular