Wednesday, October 22, 2025
Flats for sale
Homeಜಿಲ್ಲೆಮಂಗಳೂರು : ಹಣಕ್ಕಾಗಿ ಗಂಡ-ಹೆಂಡತಿಯನ್ನು ಬೆರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಒತ್ತಾಯ,ದೂರು ನೀಡಲು ಹೋದ...

ಮಂಗಳೂರು : ಹಣಕ್ಕಾಗಿ ಗಂಡ-ಹೆಂಡತಿಯನ್ನು ಬೆರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಒತ್ತಾಯ,ದೂರು ನೀಡಲು ಹೋದ ಪೋಲಿಸ್ ನಿಂದಲೂ ಲೈಂಗಿಕ ದೌರ್ಜನ್ಯ, ಗಂಡ, ಕಾವೂರು ಪೋಲಿಸ್ ಕಾನ್ಸ್ಟೇಬಲ್ ಬಂಧನ…!

ಮಂಗಳೂರು ; ಜೂಲೈ 15 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ಥ ಮಹಿಳೆಯೊರ್ವರು ಠಾಣೆಗೆ ಹಾಜರಾಗಿ ಲಿಖಿತ ದೂರನ್ನು ನೀಡಿದ್ದು, ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿದೆ ದೂರಿನಲ್ಲಿ ತಿಳಿಸಲಾಗಿದೆ.

ಸಂತ್ರಸ್ಥ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್ ನು ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್‌ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿದ್ದು ನಂತರ ಸಂತ್ರಸ್ಥೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್ ನು ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ಥೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ನನ್ನು ಬಂಧಿಸಿದ್ದು. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೋಲಿಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular