ಮಂಗಳೂರು : ಮಂಗಳೂರು,ಉಳ್ಳಾಲ ಹಾಗೂ ಬಂಟ್ವಾಳ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಹಾಗೂ ಮಂಗಳೂರಿನಲ್ಲಿ ಪಿಯು ಕಾಲೇಜುಗಳವರೆಗೆ ರಜೆ ಘೋಷಣೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಮ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ (IMD) ಹೊರಡಿಸಿದ ಹವಾಮಾನ ಎಚ್ಚರಿಕೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದಕ್ಷಿಣ ಕನ್ನಡದ ಹಲವಾರು ಭಾಗಗಳಲ್ಲಿ ಶುಕ್ರವಾರ, ರಾತ್ರಿ ಮತ್ತು ಶನಿವಾರ ಬೆಳಗಿನ ಜಾವ ಹಗಲು ಹೊತ್ತಿನಲ್ಲಿ ಭಾರೀ ಮಳೆಯಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.ಪೋಷಕರು ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಲಾಗಿದೆ.