ಅಂಕೋಲಾ : ಖಾಸಗಿ ಬಸ್ಸೊಂದು ಹಳ್ಳಕ್ಕೆ ಬಿದ್ದಿದ್ದರಿಂದ ಓರ್ವ ವ್ಯಕ್ತಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೬೩ ರಲ್ಲಿ ಸಂಭವಿಸಿದೆ.
ಬಸ್‌ನಲ್ಲಿ ಸಿಲುಕಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಹೆಸರು ವಿವರಗಳಿನ್ನೂ ತಿಳಿದು ಬರಬೇಕಿದೆ. ಸದ್ಯ ಕ್ರೇನ್ ಮೂಲಕ ಶವ ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಲಾಗಿದ್ದು ಬಸ್ಸಿನಲ್ಲಿದ್ದ ೨೫ಕ್ಕೂ ಹೆಚ್ಚು ಜನ ಪ್ರಯಾಣಿಕರು ಪಾರಾಗಿದ್ದಾರೆ.
ಬಸ್ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿತ್ತೆನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಕೊಂಡಿದ್ದಾರೆ. ಘಟನೆಗೆ ಕಾರಣವೇನೆಂಬುದರ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.


