Friday, March 6, 2026
Flats for sale
Homeರಾಜ್ಯಬೆಂಗಳೂರು : ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಜಾನುವಾರು ಪವೇಶ ನಿಷೇಧ..!

ಬೆಂಗಳೂರು : ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಜಾನುವಾರು ಪವೇಶ ನಿಷೇಧ..!

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸುವಂತೆ ಅರಣ್ಯ ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬAಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.

ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತ್ಯ ಕ್ರಮವಹಿಸಲು ಸೂಚಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ಜರುಗಿಸುವಂತೆ ನಿರ್ದೇಶನ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular