Wednesday, October 22, 2025
Flats for sale
Homeದೇಶಮುಂಬೈ : ಮಹಾರಾಷ್ಟ್ರದ ಮಾಲೆಂಗಾವ್ ಸ್ಫೋಟ ಪ್ರಕರಣ : ಸಾಧ್ವಿ ಸೇರಿ 7 ಆರೋಪಿಗಳು ದೋಷಮುಕ್ತ..!

ಮುಂಬೈ : ಮಹಾರಾಷ್ಟ್ರದ ಮಾಲೆಂಗಾವ್ ಸ್ಫೋಟ ಪ್ರಕರಣ : ಸಾಧ್ವಿ ಸೇರಿ 7 ಆರೋಪಿಗಳು ದೋಷಮುಕ್ತ..!

ಮುಂಬೈ : ದೇಶದಾದ್ಯಂತ ದೊಡ್ಡ ಸುದ್ದಿಯಾಗಿದ್ದ ಮಹಾರಾಷ್ಟçದ ಮಾಲೆಂಗಾವ್ ಸ್ಫೋಟ ಪ್ರಕರಣದ ಎಲ್ಲ 7 ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

ಈ ಮಾಲೆಂಗಾವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಆರೋಪಿಗಳನ್ನು ಸಾಕ್ಷ್ಯ ಧಾರ ಕೊರತೆಗಳಿಂದ ಖುಲಾಸೆಗೊಳಿಸಿ ಮುಂಬೈನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ
ನ್ಯಾಯಮೂರ್ತಿ ಎ.ಕೆ ಲಹೋಟಿ ಇಂದು ತೀರ್ಪು ಪ್ರಕಟಿಸಿದ್ದಾರೆ.

ಮಹಾರಾಷ್ಟç ಕೋಮುಸೂಕ್ಷö್ಮ ಮಾಲೆಂಗಾವ್ ಪಟ್ಟಣದಲ್ಲಿ 17 ವರ್ಷಗಳ ಹಿಂದೆ 2004ರಲ್ಲಿ ಮಸೀದಿ ಬಳಿ ನಿಲ್ಲಿಸಲಾಗಿದ್ದ ಮೋಟಾರ್
ಸೈಕಲ್‌ಗೆ ಬಾಂಬ್ ಇಟ್ಟು ಸ್ಫೋಟಿಸಲಾಗಿತ್ತು. ಸ್ಫೋಟದ ತೀವ್ರತೆಗೆ 6 ಜನ ಮೃತಪಟ್ಟು, 1೦೦ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ಸ್ಫೋಟಕ್ಕೆ ಆಗ ಸಂಸದರಾಗಿದ್ದ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಕಾರಣ ಎಂಬ ಆರೋಪಗಳು ಕೇಳಿ ಬಂದಿದ್ದವು.
ಈ ಸ್ಫೋಟಕ್ಕೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರ ಬೈಕನ್ನು ಬಳಸಲಾಗಿದೆ, ಕರ್ನಲ್ ಪ್ರಸಾದ್ ಪುರೋಹಿತ್ ಬಾಂಬ್ ತಯಾರಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಇಬ್ಬರೂ ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಕಟಿಸುವ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ೭ ಮಂದಿಯನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪ ಹೊರಿಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಮಹಾರಾಷ್ಟçದ ಭಯೋತ್ಪಾದನಾ ನಿಗ್ರಹ ದಳ
ನಡೆಸಿತ್ತು. 2011 ರಲ್ಲಿ ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿತ್ತು.

ಎನ್‌ಐಎ ಈ ಪ್ರಕರಣದ ತನಿಖೆ ನಡೆಸಿ 7 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್‌ಪುರೋಹಿತ್, ನಿವೃತ್ತ ಮೇಜರ್ ರಮೇಶ್ ಉಪಾಧ್ಯಾಯ, ಅಜಯ್ ರಾಹಿರ್ಕರ್, ಸುಧಾಕರ್
ದ್ವಿವೇದಿ, ಸುಧಾಕರ್ ಚರ್ತುವೇದಿ ಮತ್ತು ಸಮೀರ್ ಕುಲಕರ್ಣಿ ಈ 7 ಆರೋಪಿಗಳ ವಿರುದ್ಧ ಎನ್‌ಐಎ ತನಿಖೆ ನಡೆಸಿ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿತ್ತು. ನ್ಯಾಯಾಲಯದಲ್ಲಿ 2018 ರಿಂದ ಮಾಲೇಂಗಾವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸಿದ್ದು, 5 ನ್ಯಾಯಾಧೀಶರು ಈ ಪ್ರಕರಣದ ವಾದ-ವಿವಾದವನ್ನು ಆಲಿಸಿದ್ದರು.

ಈ ಪ್ರಕರಣಕ್ಕೆ ಸಂಬAಧಿಸಿದAತೆ ೨೦೨೫ರ ಏಪ್ರಿಲ್‌ನಲ್ಲಿ ವಾದ- ಪ್ರತಿವಾದ ಪೂರ್ಣಗೊಂಡಿತ್ತು. ಈ ಪ್ರಕರಣಕ್ಕೆ ಸಂಬAಧಿಸಿದAತೆ 123 ಸರ್ಕಾರಿ ಸಾಕ್ಷಿಗಳು ಮತ್ತು 8 ಪ್ರತಿವಾದಿ ಸಾಕ್ಷಿಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿತ್ತು. ಈ ಪ್ರಕರಣದ ಅಂತಿಮ ತೀರ್ಪನ್ನು ಮುಂಬೈನ ಎನ್‌ಐಎ ವಿಶೇಷ
ನ್ಯಾಯಾಲಯದ ನ್ಯಾಯಮೂರ್ತಿ ಎ.ಕೆ ಲಹೋಟಿ ಇಂದು ಪ್ರಕಟಿಸಿದ್ದು, ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.

ಈ ಪ್ರಕರಣದ ತೀರ್ಪು ನೀಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ.ಕೆ ಲಹೋಟಿ ಅವರು ಮೋಟಾರ್ ಸೈಕಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸಲು ವಿಫಲವಾಗಿದೆ. RDX ಕಾಶ್ಮೀರದಿಂದತರಲಾಗಿದೆ ಎಂಬುದಕ್ಕೂ ಬಲವಾದ ಪುರಾವೆಗಳಿಲ್ಲ, ಹಾಗೆಯೇ ಬೈಕ್ ಸಾಧ್ವಿಪ್ರಜ್ಞಾಸಿಂಗ್ ಅವರದೆಂದು ಸಾಬೀತುಪಡಿಸುವ ಸಾಕ್ಷಿಗಳಿಲ್ಲ ಎಂದು ಹೇಳಿ ಯಾವುದೇ ಬಲವಾದ ಪುರಾವೆಗಳಿಲ್ಲ,ಸಾಕ್ಷö್ಯಗಳಿಲ್ಲ ಎಂದುಹೇಳಿ ಎಲ್ಲ 7 ಆರೋಪಿಗಳನ್ನು ಖುಲಾಸೆಗೊಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular