Thursday, March 12, 2026
Flats for sale
Homeಜಿಲ್ಲೆಬೆಂಗಳೂರು : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ...

ಬೆಂಗಳೂರು : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ..!

ಬೆಂಗಳೂರು : ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ಪ್ರಜ್ವಲ್​ ರೇವಣ್ಣ ಶಿಕ್ಷೆಯ ವಿವರ
ಪ್ರಜ್ವಲ್‌ ರೇವಣ್ಣಗೆ ಐಪಿಸಿ ಸೆಕ್ಷನ್ 376(2)(k) ಅಡಿ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ.
ಐಪಿಸಿ ಸೆಕ್ಷನ್ 376 (2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಸೆರೆವಾಸದ ಶಿಕ್ಷೆ ಅತ್ಯಾಚಾರದ 2 ಸೆಕ್ಷನ್‌ಗಳಲ್ಲಿ ಪ್ರಜ್ವಲ್‌ಗೆ ಒಟ್ಟು 10 ಲಕ್ಷ ರೂ. ದಂಡ. ಒಟ್ಟು ದಂಡದ ಹಣದಿಂದ ಪ್ರಕರಣದ ಸಂತ್ರಸ್ತೆಗೆ 11 ಲಕ್ಷ ರೂ. ನೀಡಬೇಕು. ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್‌ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು. ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular