ನವದೆಹಲಿ : ಭಾರತದ ಸುಮಾರು 2000 ಕಿ.ಮೀ ಭೂಮಿಯನ್ನು ಚೀನಾ ವಶಪಡಿಸಿಕೊಂಡಿದೆ ಎನ್ನುವ ಲೋಕಸಭೆ ವಿರೋಧ ಪಕ್ಷದ ನಾಯಕ
ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ನಿಜವಾದ ಭಾರತೀಯರು ಹಾಗೆ ಹೇಳುವುದಿಲ್ಲ ಎಂದು ಕಿಡಿಕಾರಿದೆ.
2000 ಚದರ ಕಿ.ಮೀ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎನ್ನುವುದು ನಿಮಗೆ ಹೇಗೆ ಗೊತ್ತು. ನಿಮ್ಮ ಬಳಿ ವಿಶ್ವಾಸಾರ್ಹ ಮಾಹಿತಿ ಏನಿದೆ. ನೀವು ನಿಜವಾದ ಭಾರತೀಯರಾಗಿದ್ದರೆ ಹೀಗೆ ಹೇಳುತ್ತಿರಲಿಲ್ಲ, ನೀವು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿ ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ಅತೃಪ್ತಿ ಅಸಮಾಧಾನ ಹೊರಹಾಕಿದೆ.
2022 ರಲ್ಲಿ ಭಾರತ- ಚೀನಾ ಸೈನಿಕರ ನಡುವೆ ಉಂಟಾದ ಸೇನಾ ಘರ್ಷಣೆ ಬಳಿಕೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸಂಬAಧ ಗಡಿ ರಸ್ತೆ ಸಂಘಟನೆಯ ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದ ಅರ್ಜಿ ವಿರುದ್ದ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ವಿಚಾರಣೆ ವೇಳೆ ಈ ಅಭಿಪ್ರಾಯ ಹೊರಹಾಕಿದೆ.
ಭಾರತ- ಚೀನಾ ಗಡಿಯಲ್ಲಿ ಸಂಘರ್ಷ ಉಂಟಾದ ವೇಳೆ ಇದನ್ನೆಲ್ಲಾ ಹೇಳಿದ್ದೀರಿ. ಸಂಸತ್ತಿನಲ್ಲಿ ನೀವು ಏಕೆ ಪ್ರಶ್ನೆ ಕೇಳಬಾರದು ಎಂದು ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದೆ. ಮೇ 29 ರಂದು ಅಲಹಾಬಾದ್ ಹೈಕೋರ್ಟ್ ಸಮನ್ಸ್ ಆದೇಶ ಮತ್ತು ಕ್ರಿಮಿನಲ್ ದೂರನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ನಂತರ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಮತ್ತು ದುರುದ್ದೇಶಪೂರಿತ ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಅವರು ವಾದಿಸಿದ್ದರು.
ದೂರುದಾರರಾದ ಉದಯ್ ಶಂಕರ್ ಶ್ರೀವಾಸ್ತವ ಅವರು, 2022 ರ ಡಿಸೆಂಬರ್ 2022 ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ,
ಚೀನಾದೊAದಿಗಿನ ಗಡಿ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿಕೆ ಭಾರತೀಯ ಸೇನೆಯ ವಿರುದ್ಧ ಹಲವಾರು ಅವಹೇಳನಕಾರಿ ಹೇಳಿಕೆಗಳನ್ನು
ನೀಡಿದ್ದಾರೆ ಎಂದು ಆರೋಪಿಸಿ ಮಾನನಷ್ಠ ಪ್ರಕರಣ ದಾಖಲಿಸಿದ್ದರು
ವಿಚಾರಣೆಗೆ ತಡೆ: ರಾಹುಲ್ ನಿರಾಳ 2020 ರ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತಚೀನಾ ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಗೆ ಸಂಬAಧಿಸಿದAತೆ ಉತ್ತರ ಪ್ರದೇಶದ ಲಕ್ನೋ ನ್ಯಾಯಾಲಯದಲ್ಲಿ ನಡೆಯುತ್ತರಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಈ ಸಂಬAಧ ಪ್ರಕರಣದ ವಿಚಾರಣಾ ನ್ಯಾಯಾಲಯದ ಮುಂದೆ ಮುಂದಿನ ವಿಚಾರಣೆಗೆ ತಡೆ ಸುಪ್ರೀಂ ಕೋರ್ಟ್ ತಡೆ ನೀಡುವ ಮೂಲಕ ಲೋಕಸಭೆ
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೆಮ್ಮದಿಯ ನಿಟ್ಟಿಸಿರುವ ಬಿಡುವಂತೆ ಮಾಡಿದೆ. 2023 ರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆ ಆಧರಿಸಿ ಗಡಿ ರಸ್ತೆ ಸಂಘಟನೆಯ ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆ ಪ್ರಸ್ತುತ ಲಕ್ನೋ ನ್ಯಾಯಾಲಯದಲ್ಲಿ ನಡೆಸುತ್ತಿದ್ದು ಅದಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.