ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ರೋಷನ್ ಜೊತೆ ಹಸೆಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ.


ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ.ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.
ಇನ್ನೂ ಅನುಶ್ರೀ ಅವರುಕೊಡಗು ಮೂಲದ ರೋಷನ್ ಜೊತೆ ಆಗಸ್ಟ್ 28 ರಂದು ಸಪ್ತಪದಿ ತುಳಿಯಲಿದ್ದಾರೆ. ರೋಷನ್ ರಾಮಮೂರ್ತಿ ಅವರ ಪುತ್ರನಾಗಿದ್ದಾರೆ. ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಕೈ ಹಿಡಿಯಲಿದ್ದಾರೆ. ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಅವರು ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ.