ಮಂಗಳೂರು : ಆ. 29 ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದು . ಈ ಬಗ್ಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ಮಂಗಳೂರು ರವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆ ಮಾಡಿದ ಆಪಾಧಿತ ನನ್ನು ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿಕುಮಾರ್ (38) ಎಂದು ತಿಳಿದುಬಂದಿದ್ದು ಆತನನ್ನು ತಮಿಳುನಾಡಿನ ರಾಜ್ಯ ವೆಲ್ಲೂರ್ ನಲ್ಲಿ ವಶ ಪಡೆಯಲಾಗಿದೆ.ಈತನ ಮೇಲೆ ಮೊ.ನಂ 156/2025 ಕಲಂ:- 351(2), 351(3) BNS U/s:- 3(1)d Suppression of unlawful acts against safety of civil aviation act 1982 ಪ್ರಕರಣ ದಾಖಲಿಸಿಕೊಂಡು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಆರೋಪಿಯನ್ನು ವಿಚಾರಣೆ ನಡೆಸಿದಾಗ ಈತನು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದನೆಂದು ತಿಳಿದುಬಂದಿದೆ.