Saturday, July 25, 2026
Homeಜಿಲ್ಲೆಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು :...

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು : ಸಹಾಯಕ ಆಯುಕ್ತರ ಆದೇಶ..!

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಜಿಲ್ಲೆಯಿಂದ ಒಂದು ವರ್ಷ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು(ಎಸಿ) ಆದೇಶ ಹೊರಡಿಸಿದ್ದು ಅದನ್ನು ಜಾರಿ ಮಾಡಲಾಗಿದೆ.

ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ಇವೆ. ಹೀಗಾಗಿ ಇವರನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಈ ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರು ಅಥವಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದಾಗ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶ ನೀಡಲಾಗಿದೆ. ಪೊಲೀಸರ ಪರವಾಗಿ ಡಿಎಸ್ಪಿ ಬಂಟ್ವಾಳ ಮತ್ತು ತಿಮರೋಡಿ ಪರವಾಗಿ ವಕೀಲರು ಪ್ರಕರಣವನ್ನು ಮಂಡಿಸಿದರು.ಆದರೆ ಅವರಿಗೆ ಸರ್ಕಾರ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿರುತ್ತದೆ.

ಸೌಜನ್ಯ ಪರ ಹೋರಾಟದಲ್ಲೂ ಸಹ ಇವರು ಮುಂಚೂಣಿಯಲ್ಲಿದ್ದರು. ಅಲ್ಲದೇ ಧರ್ಮಸ್ಥಳ ಪ್ರಕರಣದಲ್ಲೂ ಸಹ ಕಾಣಿಸಿಕೊಂಡಿದ್ದು, ಈ ಸಂಬಂಧ ಇವರ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧವೂ ಸಹ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular