ಬೆಂಗಳೂರು : ದಸರಾ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಿರುವಾಗಲೇ, ರಾಜ್ಯ ಸರ್ಕಾರವು ಕೆಎಸ್‌ಆರ್‌ಟಿಸಿ ಬಸ್‌ಗಳ
ಟಿಕೆಟ್ ದರವನ್ನು ರೂ. 20 ಗಳಷ್ಟು ಹೆಚ್ಚಳ ಮಾಡಿದೆ.ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ಜನರು ತಮ್ಮ ಊರುಗಳಿಗೆ ಅಥವಾ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವುದು ವಾಡಿಕೆ. ಅದರಲ್ಲೂ ವಿಶ್ವವಿಖ್ಯಾತ ದಸರಾವನ್ನು ಕಣ್ತುಂಬಿಕೊಳ್ಳಲು ಲಕ್ಷಾAತರ ಪ್ರವಾಸಿಗರು ಮೈಸೂರಿಗೆ ಪ್ರಯಾಣ ಬೆಳೆಸುತ್ತಾರೆ. ಇದೇ ಸಂದರ್ಭವನ್ನು ಬಳಸಿಕೊಂಡು ಕೆಎಸ್‌ಆರ್‌ಟಿಸಿ ಟಿಕೆಟ್ ದರ ಏರಿಕೆ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ದರ ಹೆಚ್ಚಳದಿಂದಾಗಿ ಪ್ರವಾಸಿಗರು ಹಾಗೂ ಸಾಮಾನ್ಯ ಪ್ರಯಾಣಿಕರ ಜೇಬಿಗೆ ಹೊರೆಯಾಗಿದ್ದು, ಹಬ್ಬದ ಸಂಭ್ರಮದ ನಡುವೆಯೇ ಪ್ರಯಾಣದ ವೆಚ್ಚ ದುಬಾರಿಯಾದಂತಾಗಿದೆ