ಮಂಗಳೂರು ; ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ, ಹಾಗೂ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ನೇತೃತ್ವದ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇಂದು ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ ಉದ್ಘಾಟನೆಗೊಳ್ಳಲಿದ್ದು .ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 10 ಹುಲಿವೇಷ ತಂಡಗಳು ಭಾಗವಹಿಸಲಿವೆ. ಪ್ರತಿ ತಂಡವೂ ವೈಭವದ ಮೆರವಣಿಗೆ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿವೆ.
ಈ ಕಾರ್ಯಕ್ರಮದ ನೇರ ಪ್ರಸಾರಕ್ಕಾಗಿ ಈ ಲಿಂಕ್ ಕ್ಲಿಕ್ ಮಾಡಿ .