Thursday, March 12, 2026
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ಮಹಿಳಾ ನೌಕರರಿಗೆ ತಿಂಗಳಿಗೆ 1 ದಿವಸ ಋತುಚಕ್ರದ ರಜೆ,ಖಾಸಗಿ ಕಂಪನಿಗಳಿಗೂ ಅನ್ವಯ...

ಬೆಂಗಳೂರು : ರಾಜ್ಯದಲ್ಲಿ ಮಹಿಳಾ ನೌಕರರಿಗೆ ತಿಂಗಳಿಗೆ 1 ದಿವಸ ಋತುಚಕ್ರದ ರಜೆ,ಖಾಸಗಿ ಕಂಪನಿಗಳಿಗೂ ಅನ್ವಯ ಸಚಿವ ಸಂಪುಟ ಬಳಿಕ ಘೋಷಣೆ..!

ಬೆಂಗಳೂರು : ದೀಪಾವಳಿಗೆ ಮುನ್ನವೇ ಗೃಹಲಕ್ಷ್ಮಿ ಯರಿಗೆ ರಾಜ್ಯ ಸರಕಾರ ಸಿಹಿಸುದ್ದಿ ನೀಡಿದೆ. ಖಾಸಗಿ ವಲಯವೂ ಸೇರಿದಂತೆ ಸರಕಾರಿ, ಅರೆ ಸರಕಾರಿ, ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ಯಲ್ಲಿ ಗುರುವಾರ ನಡೆದ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ವಿಷಯ ತಿಳಿಸಿದರು.
ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿಗಳು ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ನೀಡುವ ಸಂಬAಧ ಮೆನ್‌ಸ್ಟುçವಲ್ ಲೀವ್ ಪಾಲಿಸಿ 2025 ಜಾರಿಗೆ ತರಲು ನಿರ್ಣಯಿಸಲಾಗಿದೆ.

ಈ ನೀತಿಯನ್ನು ಮಹಿಳೆಯರ ಹಕ್ಕು ರಕ್ಷಿಸುವ ದೃಷ್ಟಿಯಿಂದ ಜಾರಿಗೊಳಿಸಲು ಸರಕಾರ ಮುಂದಾಗಿದೆ ಎಂದು ಹೇಳಿದರು. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಋತುಚಕ್ರ ರಜೆ ಜಾರಿಯಲ್ಲಿದೆ. ಹಿಂದೆಯೇ ಸುಪ್ರೀಂ ಕೋರ್ಟ್ ಹೇಳಿತ್ತು ಔದ್ಯೋಗಿಕ ವಲಯದಲ್ಲಿ ಮಹಿಳೆಯರನ್ನು ಹೆಚ್ಚು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರಿಗೆ ಅನುಕೂಲವಾಗುವ ಋತುಚಕ್ರ ರಜೆಯಂತಹ ನೀತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು 2024 ರ ಜುಲೈನಲ್ಲಿ ಸುಪ್ರಿಂಕೋರ್ಟ್ನ ಅಂದಿನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದರು. ಈ ವ್ಯವಸೆ ಈ ಹಿಂದೆ ಬಿಹಾರದಲ್ಲಿ ತಿಂಗಳಿಗೆ ಎರಡು ದಿನ ರಜೆ ಕೇರಳದಲ್ಲಿ ತಿಂಗಳಿಗೆ ಒಂದು ದಿನ ಸೂಟಿ ಒಡಿಶಾದಲ್ಲಿ ತಿಂಗಳಿಗೆ ಒಂದು ದಿನ ರಜೆ ಚಾಲನೆಯಲ್ಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular