Thursday, March 12, 2026
Flats for sale
Homeಜಿಲ್ಲೆಪುತ್ತೂರು : ಸಂಚಾರಿ ಪೊಲೀಸರಿಂದ ಆಟೋ ಚಾಲಕನನ್ನು ಹಿಂಬಾಲಿಸಿ, ತಡೆದು ಹಲ್ಲೆ ಪ್ರಕರಣ,ಇಬ್ಬರು ಪೊಲೀಸರು ಅಮಾನತು..!

ಪುತ್ತೂರು : ಸಂಚಾರಿ ಪೊಲೀಸರಿಂದ ಆಟೋ ಚಾಲಕನನ್ನು ಹಿಂಬಾಲಿಸಿ, ತಡೆದು ಹಲ್ಲೆ ಪ್ರಕರಣ,ಇಬ್ಬರು ಪೊಲೀಸರು ಅಮಾನತು..!

ಪುತ್ತೂರು : ನ. 17 ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮಕ್ಕೆ ಸಮವಸ್ತ್ರ ಧರಿಸದೇ ಆಟೋ ಚಲಾಯಿಸಿಕೊಂಡು ಬರುತ್ತಿದ್ದು , ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶೈಲ ಎಂ ಕೆ, ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರು ಆದರೆ ಆತನು ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿದ್ದಾನೆ ಎಂದು ತಿಳಿದಿದೆ. ಈ ಬಗ್ಗೆ ವಿಡಿಯೋ ವೈರಲ್ ಆಗಿದ್ದು ಸಂಚಾರಿ ಪೋಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಸಂಚಾರಿ ಪೊಲೀಸರು ಆಟೋ ಚಾಲಕನನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್‌ ಆದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿವರು ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular