Tuesday, October 21, 2025
Flats for sale
Homeಜಿಲ್ಲೆಮಂಗಳೂರು : ಲಾಲ್ ಬಾಗ್ ಬಳಿಯ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ 20...

ಮಂಗಳೂರು : ಲಾಲ್ ಬಾಗ್ ಬಳಿಯ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ, 20 ಗಂಟೆಯ ಒಳಗೆ ಆರೋಪಿಗಳ ಬಂಧನ..!

ಮಂಗಳೂರು : ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಕಳವು ಮಾಡಿದ ಇಬ್ಬರು ಆರೋಪಿಗಳನ್ನು 20 ಗಂಟೆಯ ಒಳಗೆ ಬಂಧನ ಮತ್ತು ಚಿನ್ನಾಭರಣ, ನಗದು ಹಾಗೂ 3000 Dirham ಗಳನ್ನು ವಶಪಡಿಸಿಕೊಂಡಿದ್ದಾರೆ.

ಆ ೧೯. ರಂದು ರಾತ್ರಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿರುವ 03 ಫ್ಲಾಟ್ ಗಳಿಗೆ ನುಗ್ಗಿದ ಕಳ್ಳರು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು, ರೂ 5000/- ನಗದು ಹಣ, 3000 Dirham ಹಾಗೂ ಮೊಬೈಲ್ ಫೋನ್ ನ್ನು ಕಳ್ಳತನ ಮಾಡಿದ್ದು ಈ ಬಗ್ಗೆ ಬಗ್ಗೆ ರಿಯಾಜ್ ರಶೀದ್ ಎಂಬವರು ನೀಡಿದ ದೂರು ನೀಡಿದ್ದರು.ಈ ಹಿನ್ನೆಲೆ ಆ. ೨೦ ರಂದು ಬೆಳಿಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ 104/2025 ಕಲಂ 331(4), 305(ಎ) ಬಿ ಎನ್ ಎಸ್ -2023 ನೇದರಂತೆ ಪ್ರಕರಣ ದಾಖಲಾಗಿತ್ತು

ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಉರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿಯವರು ಹಾಗೂ ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡವು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಡೆಸಿದ್ದು,ಆರೋಪಿ ಪತ್ತೆ ಕಾರ್ಯವನ್ನು ನಡೆಸಿದ್ದಾರೆ. ಪ್ರಕರಣ ದಾಖಲಾಗಿ ಸುಮಾರು 20 ಗಂಟೆಗಳ ಒಳಗಾಗಿ ಶೀಘ್ರ ಕಾರ್ಯ ಪ್ರವೃತ್ತರಾಗಿ, ಸದ್ರಿ ಮನೆಗಳ ಕನ್ನ ಕಳವು ಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನುಇಂದು ರ ಬೆಳಗಿನ ಜಾವ ಬೆಂಗಳೂರಿನಲ್ಲಿಬಂಧಿಸಿದ್ದಾರೆ.

ಬಂಧಿತರನ್ನು ಅಸ್ಸಾಂ ರಾಜ್ಯದ 24 ವರ್ಷ ಅಭಿಜಿತ್ ದಾಸ್ ಹಾಗೂ ದೇಬಾ ದಾಸ್ (೨೧) ಎಂದು ತಿಳಿದಿದೆ. ಆರೋಪಿಗಳು ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳನ್ನು, ರೂ 5000/- ನಗದು ಹಣ, ರೂ 70,000/- ಬೆಲೆಯ 3000 Dirham ಹಾಗೂ ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ ಈ ಮೊದಲು ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿದೆ . ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಮುಂದಿನ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುವುದು ಮತ್ತು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular