ಬಂಟ್ವಾಳ : ಭಾನುವಾರ ರಾತ್ರಿ ರಾಯಿ ಎಂಬಲ್ಲಿ ಹಿಂಬದಿಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟು, ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ಚಂದ್ರಶೇಖರ್ ವಿದ್ಯುತ್ ಗುತ್ತಿಗೆದಾರ ಎಂದು ಗುರುತಿಸಲಾಗಿದೆ. ಸವಾರ ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಯೋಗೀಶ್ ಅವರು ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಪಿಲಿಯನ್ ರೈಡ್ ಮಾಡುತ್ತಿದ್ದ ಚಂದ್ರಶೇಖರ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯೋಗೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಸಂಚಾರ ಎಸ್‌ಐ ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.