ಮಂಗಳೂರು : ಮಂಗಳೂರಿನ ನಂತೂರಿನಲ್ಲಿ ಶುಕ್ರವಾರ ಹುಂಡೈ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.


ಮೂವರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಸ್ಥಳೀಯ ನಿವಾಸಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ತಕ್ಷಣ ಕಾರ್ಯಪ್ರವೃತ್ತರಾಗಿದ್ದು ಬದಿಯಲ್ಲಿ ಚಲಿಸುತ್ತಿದ್ದ ಅವರು ನೀರಿನ ಟ್ಯಾಂಕರ್ ಬಂದ ಹಿನ್ನೆಲೆ ಬೆಂಕಿ ಮತ್ತಷ್ಟು ಹರಡುವ ಮೊದಲು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರ ಸಕಾಲಿಕ ಮಧ್ಯಪ್ರವೇಶದಿಂದಾಗಿ, ದೊಡ್ಡ ಅನಾಹುತವೊಂದು ತಪ್ಪಿತು. ಘಟನೆಯಲ್ಲಿ ಯಾವುದೇ ಗಾಯಗಳು ಸಂಭವಿಸಿಲ್ಲ ಎಂಬುದು ತಿಳಿದುಬಂದಿದೆ.


