Wednesday, November 19, 2025
Flats for sale
Homeರಾಜ್ಯಪಟ್ಟಣಂತಿಟ್ಟ : ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಳ, ಶಬರಿಮಲೆ ಭಕ್ತರಿಗೆ ನದಿಯಲ್ಲಿ ಸ್ನಾನ...

ಪಟ್ಟಣಂತಿಟ್ಟ : ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಳ, ಶಬರಿಮಲೆ ಭಕ್ತರಿಗೆ ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ತಾಕದಂತೆ ಎಚ್ಚರಿಕೆ ವಹಿಸಲು ಸೂಚನೆ …!

ಪಟ್ಟಣಂತಿಟ್ಟ : ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ, ನ.17ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರ್ಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ.

ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ತಾಕದಂತೆ ಎಚ್ಚರಿಕೆ ವಹಿಸಬೇಕು, ಯಾತ್ರೆಗೆ ಬರುವಾಗ . ಅಗತ್ಯ ಔಷಧ ತರಬೇಕು, ಯಾತ್ರೆ ಆರಂಭಕ್ಕೂ ಕೆಲ ದಿನಗಳ ಮೊದಲೇ ವಾಕಿಂಗ್‌ ಅಭ್ಯಾಸ ಮಾಡಿಕೊಳ್ಳಿ. ಬೆಟ್ಟ ಹತ್ತುವಾಗ ಧಾವಂತ ಮಾಡದೆ ನಿಧಾನವಾಗಿ ಹತ್ತಿ. ಆರೋಗ್ಯ ಸಹಾಯ ಬೇಕಿದ್ದಲ್ಲಿ ಸಿಬ್ಬಂದಿಯನ್ನು ಕೂಡಲೇ ಸಂಪರ್ಕಿಸಿ, ಹಾವು ಕಡಿದಲ್ಲಿ ತಕ್ಷಣವೇ ನಮ್ಮ ಗಮನಕ್ಕೆ ತಂದು ಚಿಕಿತ್ಸೆ ಪಡೆದುಕೊಳ್ಳಿ ಎಂದು ಸೂಚಿಸಿದೆ. ಜೊತೆಗೆ ಯಾತ್ರಿಕರಿಗೆ ಬಯಲು ಬಹಿರ್ದೆಸೆ ನಿಷೇಧಿಸಲಾಗಿದೆ. ನಿಗದಿತ ಸ್ಥಳಗಳಲ್ಲಿಯೇ ಶೌಚಕರ್ಮ ಮುಗಿಸಿ, ಸಾಬೂನಿನಿಂದ ಕೈತೊಳೆದುಕೊಳ್ಳಬೇಕು, ಕೇವಲ ಬಿಸಿ ನೀರನ್ನು ಕುಡಿಯಬೇಕು ಎಂದು ಸೂಚನೆ ನೀಡಿದೆ. ತುರ್ತು ಪರಿಸ್ಥಿತಿಗೆ 04735 203232 ಸಂಖ್ಯೆಗೆ ಕರೆ ಮಾಡಬಹುದೆಂದು ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular