ಧಾರವಾಡ : ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ನಾರಾಯಣ ಶಿಂಧೆ (42) ತಂದೆ ವಿಠ್ಠಲರಾವ (85) ಶಿವರಾಜ(12) ಶ್ರೀನಿಧಿ(10) ಆತ್ಮಹತ್ಯೆ ಮಾಡಿಕೊಂಡವರೆಂದು ತಿಳಿದುಬಂದಿದೆ.
ಕೌಟುಂಬಿಕ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರ ದೌಡಹಿಸಿದ್ದಾರೆ.


