Wednesday, December 3, 2025
Flats for sale
Homeಜಿಲ್ಲೆಮಂಗಳೂರು ; ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದ 2025-28ನೆ ಸಾಲಿನ ನೂತನ ಸಮಿತಿಯ ಪದಗ್ರಹಣ.

ಮಂಗಳೂರು ; ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದ 2025-28ನೆ ಸಾಲಿನ ನೂತನ ಸಮಿತಿಯ ಪದಗ್ರಹಣ.

ಮಂಗಳೂರು : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 202528ನೆ ಸಾಲಿನ ನೂತನ ಸಮಿತಿಯ ಪದಗ್ರಹಣ ಸಮಾರಭ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು.

ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ನೂತನ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಸಂಘದ ಪೂರ್ವಾ‘ಕ್ಷ ಆನಂದ ಶೆಟ್ಟಿ ಕೆ., ಜಗನ್ನಾಥ ಶೆಟ್ಟಿ ಬಾಳ, ಹರ್ಷ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.

ಸಂಘದ ಮಾಜಿ ಅಧ್ಯಕ್ಷ ಆನಂದ್ ಶೆಟ್ಟಿ ಅವರು ಮಾತನಾಡಿ, ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಸಂಘವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಕಟ್ಟಿ ಬೆಳೆಸುವಂತೆ ನೂತನ ಸಮಿತಿಗೆ ಸಲಹೆ ನೀಡಿದರು.

ಸರಳವಾಗಿ ನಡೆದ ಸಮಾರಂಭದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾದ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ವಿಲ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸುರೇಶ್ ಡಿ. ಪಳ್ಳಿ, ಸಿದ್ದೀಕ್ ನೀರಾಜೆ, ಸತೀಶ್ ಇರಾ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ, ಸಂದೀಪ್ ಕುಆರ್ ಎಂ., ಲಕ್ಷ್ಮೀ ನಾರಾಯಣ ರಾವ್, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸಿಕರ್, ಅಭಿಷೇಕ್ ಎಚ್.ಎಸ್., ಜಯಶೀ, ಭುವನೇಶ್ವರ ಜಿ., ಸಂದೀಪ್ ವಾಗ್ಲೆ, ಹರೀಶ್ ಕೆ. ಆದೂರ್, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಪುಷ್ಪರಾಜ್ ಬಿ.ಎನ್. ಮಾತನಾಡಿ, ಸಂಘದ ಹಿಂದಿನ ಮಾದರಿ ಕಾರ್ಯಕ್ರಮಗಳನ್ನು ಮುಂದುವರಿಸುವ ಜತೆಗೆ, ಪತ್ರಕರ್ತರ ಆರೋಗ್ಯಕ್ಕೆ ಸಂಬಂಧಿಸಿ ವಿಮಾ ಯೋಜನೆಯಂತಹ ಅಗತ್ಯ ಯೋಜನೆಗಳನ್ನು ರೂಪಿಸಲು ಒತ್ತು ನೀಡುವುದು. ತಾಲೂಕು ಸಂಘಗಳ ಬಲವ‘ನೆಗೆ ಪ್ರಯತ್ನಿಸಲಾಗುವುದು ಎಂದರು.

ವೇದಿಕೆಯಲ್ಲಿ ವಾರ್ತಾಧಿಕಾರಿ, ಸಂಘದ ಚುನಾವಣಾಧಿಕಾರಿ ಖಾದರ್ ಷಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅ‘ಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಾಜಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಾಜಿ ಅಧ್ಯಕ್ಷ ಹರ್ಷ, ರಾಜ್ಯ ನಿಕಟ ಪೂರ್ವ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಉಪಾಧ್ಯಕ್ಷ ಮುಹಮ್ಮದ ಆರೀಫ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ವಿಜಯ್ ಕೋಟ್ಯಾನ್ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular