Wednesday, December 3, 2025
Flats for sale
Homeರಾಜಕೀಯಬೆಂಗಳೂರು ; , ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ,ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : CM- DCM...

ಬೆಂಗಳೂರು ; , ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ,ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : CM- DCM Breakfast ಮೀಟಿಂಗ್ ನಲ್ಲಿ ಸಿ‌.ಎಂ ಸಿದ್ದರಾಮಯ್ಯ.

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನವಂಬರ್ ಕ್ರಾಂತಿಗೆ ಬ್ರೇಕ್ ಬಿದ್ದಿದೆ. ಮುಖ್ಯಮಂತ್ರಿ ಹುದ್ದೆಗೆ ಏನೂ ಜಟಾಪಟಿ ನಡೆಯುತ್ತಿರುವ ಸಂದರ್ಭದಲ್ಲಿ ಹೈಕಮಾಂಡ್ ಇಬ್ಬರು ನಾಯಕರ ಮನಹೊಲಿಕೆಗೆ ಪ್ರಯತ್ನ ನಡೆಸಿದೆ.

ಇತ್ತೀಚಿನ ದಿನಗಳಲ್ಲಿ, ಅದರಲ್ಲೂ ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕಾಂಗ್ರೆಸ್​​ನಲ್ಲಿ (Congress) ಕೆಲವು ಗೊಂದಲಗಳು ನಿರ್ಮಾಣವಾಗಿತ್ತು. ಈ ಕಾರಣಕ್ಕೆ ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾನು ಮತ್ತು ಉಪ ಮುಖ್ಯಮಂತ್ರ ಡಿಕೆ ಶಿವಕುಮಾರ್ (DK Shivakumar) ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ. ಇವತ್ತಿನ ವರೆಗೆ ನಮ್ಮ ಮಧ್ಯೆ ಯಾವುದೇ ಗೊಂದಲಗಳಿರಲಿಲ್ಲ. ಮುಂದೆಯೂ ಇದೇ ತರ ಮುಂದುವರಿಯಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಸರ್ಕಾರದ ವಿರುದ್ಧ ಅವಿಶ್ವಾಸ ನಿಲುವಳಿ ಮಂಡಿಸುತ್ತೇವೆ ಎಂದು ಪ್ರತಿಪಕ್ಷ ನಾಯಕರು ಹೇಳುತ್ತಿದ್ದಾರೆ. ಅದು ಅಸಾಧ್ಯ. ಪ್ರತಿಪಕ್ಷಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಸಮರ್ಥವಾಗಿ ಎದುರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಜನ ನಮ್ಮ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ವಿಧಾನಸಭೆ ಅಧಿವೇಶನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ. ನಮ್ಮದು ಒಂದೇ ಗುಂಪು, ಹೈಕಮಾಂಡ್ ಗುಂಪು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular