Friday, January 16, 2026
Flats for sale
Homeಕ್ರೀಡೆಬೆಂಗಳೂರು : ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದರೆ 6 ಕೋಟಿ,ಬೆಳ್ಳಿಗೆ 4 ಕೋಟಿ ,ಕಂಚಿಗೆ 3...

ಬೆಂಗಳೂರು : ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದರೆ 6 ಕೋಟಿ,ಬೆಳ್ಳಿಗೆ 4 ಕೋಟಿ ,ಕಂಚಿಗೆ 3 ಕೋಟಿ ನಗದು ಬಹುಮಾನ : ಸಿಎಂ ಸಿದ್ದರಾಮಯ್ಯ .

ಬೆಂಗಳೂರು : ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು, ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಒಲಿಂಪಿಕ್ಸ್ ಸAಸ್ಥೆ ಬೆಂಗಳೂರು ಇವರ ವತಿಯಿಂದ ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿಅವರು ಮಾತನಾಡುತ್ತಿದ್ದರು. ಕರ್ನಾಟಕ ಒಲಿಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಒಲಿಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿ ಮಾತನಾಡಿದ ಅವರು,1958 ರಲ್ಲಿ ಪ್ರಾರಂಭವಾದ ಒಲಿAಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ.

ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನAತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ಕರ್ನಾಟಕದ ಕ್ರೀಡಾಪಟು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದರು

RELATED ARTICLES

LEAVE A REPLY

Please enter your comment!
Please enter your name here

Most Popular