Friday, January 16, 2026
Flats for sale
Homeಜಿಲ್ಲೆಮಂಗಳೂರು : ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026,ಜನವರಿ 18...

ಮಂಗಳೂರು : ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026,ಜನವರಿ 18 ರಂದು ಕಾಸರಗೋಡು ನಲ್ಲಿ ಪ್ರಶಸ್ತಿ ಪ್ರದಾನ.

ಮಂಗಳೂರು : ಕಾಸರಗೋಡು ಕನ್ನಡ ಭವನದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾಗಿರುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 18 ರಂದು ಕಾಸರಗೋಡು ನಲ್ಲಿ ಕನ್ನಡ ಭವನ ರಜತ ಸಂಭ್ರಮ ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ. ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular