ಬೆಂಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ಶೀತಗಾಳಿಯಿಂದ ಚಳಿಯ ಅನುಭವ ಹೆಚ್ಚಾಗಿದ್ದು ಇದು ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ.
ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣದಿಂದಾಗಿ ಜನರು ತತ್ತರಿಸಿದ್ದಾರೆ. ಮಕ್ಕಳು ಮತ್ತು ವಯಸ್ಸಾದವರು ತೀವ್ರ ತೊಂದರೆ ಎದುರಿಸುವAತಾಗಿದ್ದು ವೈದ್ಯರ ಮೊರೆ ಹೋಗದೇ ಗತ್ಯಂತರವಿಲ್ಲ ಎಂಬಂತಾಗಿದೆ .
ಆ ಭಾಗದ ಗ್ರಾಮೀಣ ಪ್ರದೇಶದವರಿಗೆ ಪ್ರತಿದಿನ ಬೆಂಕಿ ಕಾಯಿಸುವುದು ಅನಿವಾರ್ಯ ಆದಂತೆ ಆಗಿದೆ. ಇನ್ನೂ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ಕ್ರಮವಾಗಿ ಬೆಚ್ಚಗಿನ ಉಡುಪುಗಳನ್ನು ಧರಿಸುವಂತೆ ವೈದ್ಯರು ಹಾಗೂ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ. ಕಳೆದ ಶನಿವಾರದಿಂದ ಅಲ್ಲಲ್ಲಿ ತುಂತುರು ಮಳೆ ಬಿದ್ದಿದೆ. ಕೆಲವೆಡೆ ಹಗುರವಾದ ಮಳೆಯೂ ಆಗಿದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಬಿಸಿಲಿನವಾತಾವರಣವಿಲ್ಲದೆ, ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದೆ. ಆದರೆ, ಕನಿಷ್ಠ ತಾಪಮಾನದಲ್ಲಿ ಗಣನೀಯ ಏರಿಕೆಯಾಗಿರುವುದು ಕಂಡುಬAದಿದೆ. ತೀವ್ರವಾದ ಚಳಿ ಇರುತ್ತಿದ್ದ ಬೀದರ್ನಲ್ಲಿ 13.4ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ


